ವಿಜಯಪುರ: ಸಂಸದ ರಮೇಶ ಜಿಗಜಿಣಗಿ ಅವರಿಗೆ ಮೆದುಳಿನಲ್ಲಿ ರಕ್ತಸ್ರಾವ ಸಮಸ್ಯೆ ಉಂಟಾದ ಪರಿಣಾಮ ಬೆಳಗಾವಿಯ ಕೆಎಲ್ ಇ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.
ಎರಡು ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಅವರಿಗೆ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ.
ಸದ್ಯ ಐಸಿಯುನಲ್ಲಿ ಇದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ.
ಈ ಹಿಂದೆ ಜ.28ರಂದು ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ಬಾಗಲಕೋಟೆಯ ಹಾನಗಲ್ ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಿದ ಬಳಿಕ ಗುಣಮುಖವಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.