ಮುದ್ದೇಬಿಹಾಳ: ‘ಜೀವಿಗಳಿರುವ ಏಕೈಕ ಗ್ರಹವೆಂದರೆ ಭೂಮಿ. ಅದನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ಮಾನವ ಜನಾಂಗದ ಮೇಲಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರವೀಂದ್ರಕುಮಾರ ಕಟ್ಟೀಮನಿ ಹೇಳಿದರು.
ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಭೂಮಿ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು.
‘ಭೂಮಿಯನ್ನು ಸ್ವಚ್ಛವಾಗಿ ಇಟ್ಟುಕೊಂಡಷ್ಟೂ, ಅದರ ಮೇಲೆ ವಾಸಿಸುವ ಜೀವಿಗಳೆಲ್ಲ ನೆಮ್ಮದಿಯಿಂದ ಇರಲು ಸಾಧ್ಯವಿದೆ’ ಎಂದರು.
ವಕೀಲ ಸಿದ್ಧನಗೌಡ ಬಿರಾದಾರ ಮಾತನಾಡಿ, ‘ಎಲ್ಲೆಡೆ ಕೃಷಿ ಭೂಮಿ ಕಡಿಮೆಯಾಗುತ್ತಿದೆ. ನಗರೀಕರಣದ ಪ್ರಭಾವದಿಂದ ಮುದೊಂದು ದಿನ ಆಹಾರ ಬೆಳೆಯಲು ಭೂಮಿಯೇ ಸಿಗದಂತಾಗುವ ಆತಂಕವಿದೆ. ಇದಕ್ಕೂ ಮುನ್ನ ನಾವು ಎಚ್ಚೆತ್ತುಕೊಳ್ಳಬೇಕು’ ಎಂದು ಹೇಳಿದರು.
ಸಿವಿಲ್ ನ್ಯಾಯಾಧೀಶ ಸಂಪತ್ ಕುಮಾರ ಬಳೂಲಗಿಡದ, ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್. ಮಾಲಗತ್ತಿ, ಸಹಾಯಕ ಸರ್ಕಾರಿ ಅಭಿಯೋಜಕ ನಾಗರಾಜ ಪೂಜಾರ, ಬಸವರಾಜ ಆಹೇರಿ, ಎಚ್.ಎಲ್. ಸರೂರ, ಪಿ.ಬಿ. ಗೌಡರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.