ಮುದ್ದೇಬಿಹಾಳ: ‘ಬೇಸಿಗೆ ಕಾಲದಲ್ಲಿ ನೀರಿಗಾಗಿ ಪ್ರಾಣಿ, ಪಕ್ಷಿಗಳು ಬಹಳಷ್ಟು ಪರದಾಡಿ ಜೀವ ಕಳೆದುಕೊಳ್ಳುವ ಸಾಧ್ಯತೆ ಇದೆ. ಮಾನವೀಯ ದೃಷ್ಟಿಯಿಂದ ನಾವೆಲ್ಲರೂ ಪಕ್ಷಿಗಳಿಗೆ ಮಣ್ಣಿನ ಪಾತ್ರೆಗಳಲ್ಲಿ ನೀರು ಇಡುವ ಕೆಲಸ ಮಾಡಬೇಕು’ ಎಂದು ಹಸಿರು ತೋರಣ ಗೆಳೆಯರ ಬಳಗದ ಮಾಜಿ ಅಧ್ಯಕ್ಷ ನಾಗಭೂಷಣ ನಾವದಗಿ ಹೇಳಿದರು.
‘ವಿಶ್ವ ಗುಬ್ಬಚ್ಚಿ ದಿನ’ದ ಅಂಗವಾಗಿ ಪಟ್ಟಣದ ಹಸಿರು ತೋರಣ ಉದ್ಯಾನದಲ್ಲಿ ಮಣ್ಣಿನ ಪಾತ್ರೆಗಳ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಕೀಲರ ಸಂಘದ ಮಾಜಿ ಅಧ್ಯಕ್ಷ ಎಚ್.ವೈ.ಪಾಟೀಲ, ವೀರೇಶ ಇಟಗಿ, ಬಳಗದ ಸಂಚಾಲಕ ಮಹಾಬಲೇಶ್ವರ ಗಡೇದ ಮಾತನಾಡಿದರು. ಆರ್. ಕಾಮಟೆ, ಬಿ.ಎಸ್. ಮೇಟಿ, ಅಶೋಕ ರೇವಡಿ, ರಾಜಶೇಖರ ಕಲ್ಯಾಣಮಠ, ರವಿ ಗೂಳಿ, ಗೌರವಾಧ್ಯಕ್ಷ ಜಿ.ಎಂ.ಹುಲಗಣ್ಣಿ, ಉಪಾಧ್ಯಕ್ಷ ಸೋಮಶೇಖರ ಚೀರಲದಿನ್ನಿ, ಕಾರ್ಯದರ್ಶಿ ಅಮರೇಶ ಗೂಳಿ, ಸದಸ್ಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.