ADVERTISEMENT

ಮುದ್ದೇಬಿಹಾಳ | ದ್ವೇಷ ಭಾಷಣ ಮಸೂದೆಯಿಂದ ಸಾಂವಿಧಾನಿಕ ಹಕ್ಕಿಗೆ ಕೊಡಲಿ ಏಟು: BJP

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2025, 2:30 IST
Last Updated 26 ಡಿಸೆಂಬರ್ 2025, 2:30 IST
ಮುದ್ದೇಬಿಹಾಳ ಪಟ್ಟಣದ ತಹಶೀಲ್ದಾರ್ ಕಚೇರಿಗೆ ಬುಧವಾರ ಆಗಮಿಸಿದ್ದ ಬಿಜೆಪಿ ಕಾರ್ಯಕರ್ತರು ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ವಿರುದ್ಧ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಕೀರ್ತಿ ಚಾಲಕ್ ಅವರಿಗೆ ಮನವಿ ಸಲ್ಲಿಸಿದರು
ಮುದ್ದೇಬಿಹಾಳ ಪಟ್ಟಣದ ತಹಶೀಲ್ದಾರ್ ಕಚೇರಿಗೆ ಬುಧವಾರ ಆಗಮಿಸಿದ್ದ ಬಿಜೆಪಿ ಕಾರ್ಯಕರ್ತರು ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ವಿರುದ್ಧ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಕೀರ್ತಿ ಚಾಲಕ್ ಅವರಿಗೆ ಮನವಿ ಸಲ್ಲಿಸಿದರು   

ಮುದ್ದೇಬಿಹಾಳ: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಜಾರಿಗೊಳಿಸುತ್ತಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಕಾಯ್ದೆಯು ಅಂಬೇಡ್ಕರ್ ಅವರು ಕೊಟ್ಟಿರುವ ಸಾಂವಿಧಾನಿಕ ಹಕ್ಕುಗಳಿಗೆ ಕೊಡಲಿಪೆಟ್ಟು ನೀಡುತ್ತದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಗೆ ಬುಧವಾರ ಆಗಮಿಸಿದ್ದ ಬಿಜೆಪಿ ಕಾರ್ಯಕರ್ತರು ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ವಿರುದ್ಧ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿ ಮಾತನಾಡಿದರು.

ಸಂವಿಧಾನದ 19(1) ಹಾಗೂ (2)ರ ವಾಕ್ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆ ಆಗುತ್ತದೆ. ಸರ್ಕಾರದ ವಿರುದ್ಧ ಮಾತನಾಡುವರ ಬಾಯಿ ಮುಚ್ಚಿಸುವ ಹುನ್ನಾರವಾಗಿದೆ ಎಂದು ಆರೋಪಿಸಿದರು.

ADVERTISEMENT

ಸರ್ಕಾರದ ನೀತಿಗಳ ವಿರುದ್ಧ ಟೀಕೆ, ಸಾಮಾಜಿಕ ಚರ್ಚೆ, ವ್ಯಂಗ್ಯ ಮಾಡುವುದು ಅಥವಾ ಸತ್ಯವನ್ನು ಹೇಳುವುದನ್ನೂ ಕೂಡ ದ್ವೇಷ ಎಂದು ಪರಿಗಣಿಸುವ ಅಪಾಯವಿದೆ ಎಂದು ದೂರಿದರು.

ಪ್ರಧಾನ ಕಾರ್ಯದರ್ಶಿ ಸಂಜು ಬಾಗೇವಾಡಿ, ಪದಾಧಿಕಾರಿಗಳಾದ ಗಿರೀಶಗೌಡ ಪಾಟೀಲ,ರವಿಕುಮಾರ ಹವಾಲ್ದಾರ್,ಸಂಗಣ್ಣ ಹತ್ತಿ,ಅಶೋಕ ರಾಠೋಡ, ಲಕ್ಷ್ಮಣ ಬಿಜ್ಜೂರ,ಸಿದ್ಧರಾಜ ಹೊಳಿ, ಎಸ್.ಎಚ್.ಲೊಟಗೇರಿ,ಮುತ್ತಣ್ಣ ಹುಗ್ಗಿ,ಪುನೀತ ಹಿಪ್ಪರಗಿ, ನಿಖಿಲ ಮಲಗಲದಿನ್ನಿ, ಪುರಸಭೆ ಸದಸ್ಯರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.