ಸಾವು (ಪ್ರಾತಿನಿಧಿಕ ಚಿತ್ರ)
ವಿಜಯಪುರ: ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಹೊಲದಲ್ಲಿ ಮಂಗಳವಾರ ಕೆಲಸ ಮಾಡುತ್ತಿದ್ದ ರೈತ ಮಲ್ಲಪ್ಪ ಗುರುಶಾಂತಪ್ಪ ತಾಳಿಕೋಟಿ(50) ಸಿಡಿಲು ಬಡಿದು ಸಾವಿಗೀಡಾಗಿದ್ದಾರೆ.
ವಿಜಯಪುರ ನಗರ ಮತ್ತು ನಾಲತವಾಡ ಪಟ್ಟಣದಲ್ಲಿ ಗುಡುಗು, ಸಿಡಿಲಿನೊಂದಿಗೆ ಸುಮಾರು ಒಂದು ತಾಸು ಧಾರಾಕಾರವಾಗಿ ಮಳೆ ಸುರಿಯಿತು.
ಬೇಸಿಗೆ ಬಿಸಿಲಿನಿಂದ ತತ್ತರಿಸಿ ಹೋಗಿದ್ದ ವಿಜಯಪುರದ ಜನತೆ ಈ ವರ್ಷದ ಪ್ರಥಮ ಮಳೆಯಿಂದ ನಿರಾಳರಾದರು. ಬಿಸಿಲಿನಿಂದ ಕಾದು ಕಾವಲಿಯಂತಾಗಿದ್ದ ವಾತಾವರಣ ಮಳೆಯಿಂದ ತಂಪಾಯಿತು. ಮಳೆಯ ಆರ್ಭಟಕ್ಕೆ ಚರಂಡಿಗಳು ಉಕ್ಕಿ ರಸ್ತೆಯ ಮೇಲೆ ನೀರು ಹರಿಯಿತು. ನಗರದ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ಆವರಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.