ADVERTISEMENT

ಶೀಘ್ರದಲ್ಲಿ ಮುಳವಾಡ ಏತ ನೀರಾವರಿ ಯೋಜನೆಗೆ ಚಾಲನೆ:ಪಾಟೀಲ

ಸಚಿವ ಶಿವಾನಂದ ಪಾಟೀಲ ಭರವಸೆ

​ಪ್ರಜಾವಾಣಿ ವಾರ್ತೆ
Published 8 ಮೇ 2025, 15:14 IST
Last Updated 8 ಮೇ 2025, 15:14 IST
ಕೊಲ್ಹಾರ ತಾಲ್ಲೂಕಿನ ಮುಳವಾಡ ಗ್ರಾಮದಲ್ಲಿ 15ನೇ ಹಣಕಾಸು ಯೋಜನೆ ಅಡಿಯಲ್ಲಿ ₹ 20.25 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಬಸ್ ನಿಲ್ದಾಣ ಕಟ್ಟಡವನ್ನು ಸಚಿವ ಶಿವಾನಂದ ಪಾಟೀಲ ಉದ್ಘಾಟಿಸಿದರು 
ಕೊಲ್ಹಾರ ತಾಲ್ಲೂಕಿನ ಮುಳವಾಡ ಗ್ರಾಮದಲ್ಲಿ 15ನೇ ಹಣಕಾಸು ಯೋಜನೆ ಅಡಿಯಲ್ಲಿ ₹ 20.25 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಬಸ್ ನಿಲ್ದಾಣ ಕಟ್ಟಡವನ್ನು ಸಚಿವ ಶಿವಾನಂದ ಪಾಟೀಲ ಉದ್ಘಾಟಿಸಿದರು    

ಕೊಲ್ಹಾರ: ಆಲಮಟ್ಟಿ ಅಣೆಕಟ್ಟೆಯ 80 ಟಿಎಂಸಿ ನೀರನ್ನು ವಿಜಯಪುರ ಜಿಲ್ಲೆಗೆ ಬಳಸಿಕೊಳ್ಳಲಾಗುತ್ತಿದ್ದು, ಶೀಘ್ರದಲ್ಲಿಯೇ  ಮುಳವಾಡ ಏತ ನೀರಾವರಿ ಯೋಜನೆಗೆ ಚಾಲನೆ ದೊರೆಯಲಿದೆ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.

ತಾಲ್ಲೂಕಿನ ಮುಳವಾಡ ಗ್ರಾಮದಲ್ಲಿ ನೂತನ ಬಸ್ ನಿಲ್ದಾಣ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆಯಲ್ಲಿ ವಿವಿಧ ಕಾಮಗಾರಿಗಳಿಗೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.  

‘₹ 58 ಕೋಟಿ ವೆಚ್ಚದಲ್ಲಿ ಬಸವನ ಬಾಗೇವಾಡಿ ಪಟ್ಟಣದಲ್ಲಿ ಮೆಗಾ ಮಾರ್ಕೆಟ್ ನಿರ್ಮಾಣ ಮಾಡಲಾಗಿದ್ದು, ಅದೇ ರೀತಿಯಾಗಿ ಮುಳವಾಡ ಗ್ರಾಮದಲ್ಲೂ ಮೆಗಾ ಮಾರ್ಕೆಟ್ ನಿರ್ಮಾಣ ಮಾಡುವ ಉದ್ದೇಶ ಹೊಂದಲಾಗಿದೆ’ ಎಂದರು.

ADVERTISEMENT

ಆಪರೇಷನ್ ಸಿಂಧೂರ ಹೆಸರಿನಲ್ಲಿ ಭಾರತ ಸರ್ಕಾರ ಕೈಗೊಂಡ ಉಗ್ರರ ನೆಲೆಗಳ ಮೇಲಿನ ಧ್ವಂಸ ಕಾರ್ಯಾಚರಣೆಯಲ್ಲಿ ಭಾಗಿಯಾದ ಸೈನಿಕರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಮುಳವಾಡ ಗ್ರಾಮ ಪಂಚಾಯಿತಿ ಅಧ್ಯಕ್ಷ ಹನುಮಂತ ಕಳಸಗೊಂಡ ಮಾತನಾಡಿ, ‘ಮುಳವಾಡ ಗ್ರಾಮವನ್ನು ಹೋಬಳಿಯನ್ನಾಗಿ ಘೋಷಣೆ ಮಾಡಬೇಕು. ಗ್ರಾಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಾಪಿಸಬೇಕು’ ಎಂದು ಸಚಿವರಲ್ಲಿ ಮನವಿ ಮಾಡಿದರು.

15ನೇ ಹಣಕಾಸು ಯೋಜನೆ ಅಡಿಯಲ್ಲಿ ₹ 20.25 ಲಕ್ಷ ಅನುದಾನದಲ್ಲಿ ನಿರ್ಮಿಸಿದ ಬಸ್ ನಿಲ್ದಾಣದ ಉದ್ಘಾಟನೆಯನ್ನು ಸಚಿವರು ನೆರವೇರಿಸಿದರು.

ಮುಳವಾಡ-ಕೊಣ್ಣೂರ ಹಿರೇಮಠದ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಬಸವ್ವ ಭಜಂತ್ರಿ, ಪಿಕೆಪಿಎಸ್ ಅಧ್ಯಕ್ಷ ರವಿ ಕೆಂಗನಾಳ, ಎಸ್‍ಡಿಎಂಸಿ ಅಧ್ಯಕ್ಷ ನಿಂಗಯ್ಯ ಹಿರೇಮಠ, ತಹಶೀಲ್ದಾರ್ ಎಸ್ ಎಸ್ ನಾಯಕಲಮಠ, ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ, ಕೆಆರ್‌ಐಡಿಎಲ್ ಎಂಜಿನಿಯರ್‌ ಆನಂದಸ್ವಾಮಿ. ಆರ್.ಡಿ.ಐಹೊಳ್ಳಿ, ವಿಠ್ಠಲ ಬಡಿಗೇರ, ಶಿವಪ್ಪ ಕಳಸಗೊಂಡ, ಚನ್ನಪ್ಪಗೌಡ ಬಿರಾದಾರ, ವೆಂಕಣಗೌಡ ಪಾಟೀಲ, ಪಿಡಿಒ ರಾಘವೇಂದ್ರ ಪಂಚಾಳ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.