ಸಿಂದಗಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರ ಕಾರ್ಮಿಕರು ಮುಷ್ಕರ ನಡೆಸುತ್ತಿದ್ದು, ಪಟ್ಟಣದಲ್ಲಿ ಸ್ವಚ್ಛತಾ ಕಾರ್ಯ ನಡೆಯದೆ ಗಬ್ಬೆದ್ದು ನಾರುತ್ತಿದೆ.
ರಸ್ತೆ, ಓಣಿಯಲ್ಲಿ ಕಸದ ರಾಶಿ ಕಂಡುಬರುತ್ತಿದೆ ಕಾಣುತ್ತಲಿದೆ. ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ.
ಪುರಸಭೆ ಕಾರ್ಯಾಲಯದ ಆವರಣದಲ್ಲಿ ಪುರಸಭೆ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಪ್ರತಿಭಟನಕಾರರು ಮನವಿ ಸಲ್ಲಿಸಿದರು. ‘ಪೌರ ಕಾರ್ಮಿಕರ ವಿಷಯದಲ್ಲಿ ಸರ್ಕಾರ ವಹಿಸಿದ ನಿರ್ಲಕ್ಷ್ಯವನ್ನು ಇನ್ನು ಸಹಿಸಲಾಗದು’ ಎಂದು ಕರ್ನಾಟಕ ರಾಜ್ಯ ಪೌರ ನೌಕರರ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಅಬ್ಬಾಸಲಿ ಕಾಖಂಡಕಿ ಆಕ್ರೋಶ ವ್ಯಕ್ತಪಡಿಸಿದರು.
ಮನವಿ ಸ್ವೀಕರಿಸಿದ ಪುರಸಭೆ ಅಧ್ಯಕ್ಷ ಡಾ. ಶಾಂತವೀರ ಮನಗೂಳಿ, ಈ ಬಗ್ಗೆ ಸರ್ಕಾರದ ಗಮನಕ್ಕೆ ತರುವ ಭರವಸೆ ನೀಡಿದರು.
ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಕಲ್ಲಪ್ಪ ಚೌರ, ಅನಿಲ ಚೌರ, ನಬಿರಸೂಲ ಉಸ್ತಾದ, ದತ್ತಾತ್ರೇಯ ಹಳ್ಳಿ, ಸಿದ್ದು ಅಂಗಡಿ, ದಯಾನಂದ ಇವಣಿ, ಸಲ್ಮಾ ಯಡ್ರಾಮಿ, ಅಲ್ತಾಫ್ ಮುಜಾವರ, ಹಬೀಬ ಯಲಗೋಡ, ಅಜೀತ್, ಆಫ್ರಿನ್ ಇಂಡಿಕರ, ಸುಮಾ ಬಡಿಗೇರ, ರೂಪಾ ಕೆಂಭಾವಿ, ಮಹಾದೇವಿ ಗುನ್ನಾಪೂರ, ರೂಪಾ ಸಿಂಧೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.