
ಪ್ರಜಾವಾಣಿ ವಾರ್ತೆ
ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಕಲ್ಯಾಣ ರಥ ಹಾಗೂ ಅಮೋಘವರ್ಷ ಬ್ರ್ಯಾಂಡಿಂಗ್ ಹಾಗೂ ವರ್ಚಸ್ಸು ಅಭಿವೃದ್ಧಿ ಉಪಕ್ರಮಗಳಿಗಾಗಿ 2023-24ನೇ ಸಾಲಿನ ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿ ಲಭಿಸಿದೆ.
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ ವತಿಯಿಂದ ನವದೆಹಲಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಿರಣ್ ಬೇಡಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಕಾ, ಮುಖ್ಯ ಯಾಂತ್ರಿಕ ಶಿಲ್ಪಿ ಸಂತೋಷ ಗೋಗೇರಿ, ಕೆಕೆಆರ್‌ಟಿಸಿ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಪ್ರಶಸ್ತಿ ಸ್ವೀಕರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.