
ಪ್ರಜಾವಾಣಿ ವಾರ್ತೆಬಸವನಬಾಗೇವಾಡಿ: ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘದ ಸಹಯೋಗದಲ್ಲಿ ರಾಷ್ಟ್ರೀಯ ಯುವ ದಿನದ ಅಂಗವಾಗಿ ಜ.12 ರಂದು ಬೆಳಿಗ್ಗೆ 9ಕ್ಕೆ ಸ್ಥಳೀಯ ಬಸವೇಶ್ವರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸಿವಿಲ್ ನ್ಯಾಯಾಧೀಶೆ ತೇಜಸ್ವಿನಿ ಸೊಗಲದ ಕಾರ್ಯಕ್ರಮ ಉದ್ಘಾಟಿಸುವರು, ಪ್ರಾಚಾರ್ಯ ಎಸ್.ಡಿ.ಪಾಟೀಲ ಅಧ್ಯಕ್ಷತೆ ವಹಿಸುವರು, ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ, ವಕೀಲರ ಸಂಘದ ಅಧ್ಯಕ್ಷ ಎಚ್.ಎಸ್.ಗುರಡ್ಡಿ, ಸಹಾಯಕ ಸರ್ಕಾರಿ ಅಭಿಯೋಜಕರಾದ ರಾಹುಲ್ ಸಾಹ, ರಾಜರಾಜೇಶ್ವರಿ ಸುತಾರ ಪಾಲ್ಗೊಳ್ಳುವರು. ವಕೀಲ ಎಸ್.ಎಸ್.ಹೆಗಡ್ಯಾಳ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.