ADVERTISEMENT

ನಿರ್ಲಕ್ಷ್ಯಿಸಿದರೆ ಕ್ರಿಮಿನಲ್ ಮೊಕದಮೆ: ಔದ್ರಾಮ್‌

ವಿಶೇಷ ಘಟಕ ಮತ್ತು ಗಿರಿಜನ ಉಪ ಯೋಜನೆ ಅನುದಾನ ಬಳಕೆ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2020, 13:25 IST
Last Updated 17 ಅಕ್ಟೋಬರ್ 2020, 13:25 IST
ವಿಜಯಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಸಾಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ್ ಮಾತನಾಡಿದರು
ವಿಜಯಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಸಾಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ್ ಮಾತನಾಡಿದರು   

ವಿಜಯಪುರ:ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಇಲಾಖಾವಾರು ನಿಗದಿ ಪಡಿಸಿದ ಅನುದಾನ ಸಮರ್ಪಕ ಬಳಕೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದಮೆ ದಾಖಲಿಸಲಾಗುವುದು ಎಂದು ಹೆಚ್ಚುವರಿಜಿಲ್ಲಾಧಿಕಾರಿ ಡಾ.ಔದ್ರಾಮ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಸಾಧಿಸಿದ ಪ್ರಗತಿ ಕುರಿತುಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿಯ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿ ಈ ಕುರಿತ ವರದಿ ಸಲ್ಲಿಸುವಂತೆ ಸೂಚಿಸಿದರು.

ADVERTISEMENT

ಪ್ರತಿ ತಿಂಗಳು 10ರೊಳಗೆ ಇಲಾಖಾವಾರು ಸಾಧಿಸಿದ ಪ್ರಗತಿ ವರದಿಯನ್ನು ಕಡ್ಡಾಯವಾಗಿ ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು ಎಂದರು.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಳಸಲಾದ ಅನುದಾನ ಮತ್ತು ಪ್ರಗತಿ ವರದಿಯನ್ನು ತಪ್ಪದೇ ಸಮಾಜಕಲ್ಯಾಣ ಇಲಾಖೆಗೆ ಸಲ್ಲಿಸಬೇಕು. ಮುಂಬರುವ ಸಭೆಗಳಲ್ಲಿ ಸೂಕ್ತ ಪ್ರಗತಿ ಸಾಧಿಸಿ ಪ್ರಗತಿ ವರದಿಯೊಂದಿಗೆ ಬರುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಭೀಮಾ ಮತ್ತು ಡೋಣಿ ನದಿ ವ್ಯಾಪ್ತಿಯಲ್ಲಿ ಪ್ರವಾಹ ಪರಿಸ್ಥಿತಿ ಇರುವುದರಿಂದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಕಾರ್ಯನಿರ್ವಹಿಸುವಂತೆ ಸೂಚಿಸಿದರು.

ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕ ರಾಮನಗೌಡ ಕನ್ನೊಳ್ಳಿ ಸಭೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.