ADVERTISEMENT

ವಿಜಯಪುರ: ನೂತನ ಜಿಲ್ಲಾಧಿಕಾರಿ ಡಾ.ಆನಂದ್‌ ಕೆ. ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 10 ಜುಲೈ 2025, 5:48 IST
Last Updated 10 ಜುಲೈ 2025, 5:48 IST
ವಿಜಯಪುರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ ಕೆ ಅವರು ಬುಧವಾರ ನಿರ್ಗಮಿತ ಜಿಲ್ಲಾಧಿಕಾರಿ ಟಿ.ಭೂಬಾಲನ್‌ ಅವರಿಂದ ಅಧಿಕಾರ ಸ್ವೀಕರಿಸಿದರು 
ವಿಜಯಪುರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ ಕೆ ಅವರು ಬುಧವಾರ ನಿರ್ಗಮಿತ ಜಿಲ್ಲಾಧಿಕಾರಿ ಟಿ.ಭೂಬಾಲನ್‌ ಅವರಿಂದ ಅಧಿಕಾರ ಸ್ವೀಕರಿಸಿದರು     

ವಿಜಯಪುರ: ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಬುಧವಾರ ನಿರ್ಗಮಿತ ಜಿಲ್ಲಾಧಿಕಾರಿ ಟಿ. ಭೂಬಾಲನ್‌ ಅವರಿಂದ  ಅಧಿಕಾರ ಸ್ವೀಕರಿಸಿದರು.

ನಿರ್ಗಮಿತ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ನೂತನ ಜಿಲ್ಲಾಧಿಕಾರಿ ಅವರನ್ನು ಹೂಗುಚ್ಛ ನೀಡಿ ಸ್ವಾಗತಿಸಿ, ಅಧಿಕಾರ ಹಸ್ತಾಂತರಿಸಿದರು.

2016ರ ಸಾಲಿನ  ಐಎಎಸ್ ಅಧಿಕಾರಿಯಾಗಿರುವ ಡಾ.ಆನಂದ್‌ ಕೆ. ಅವರು, ಜನರಲ್ ಮೆಡಿಸಿನ್ ವಿಭಾಗದಲ್ಲಿ ಎಂಬಿಬಿಎಸ್ ಹಾಗೂ ಎಂಡಿ ವೈದ್ಯಕೀಯ ಪದವಿ ಪಡೆದಿದ್ದಾರೆ. 2 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ADVERTISEMENT

ಈ ಹಿಂದೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದಲ್ಲಿ ಸಹಾಯಕ ಕಾರ್ಯದರ್ಶಿ, ಗದಗ ಜಿಲ್ಲಾ ಪಂಚಾಯಿತಿ  ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ತದನಂತರ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಉಪ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರೊಬೆಷನರಿ ಅಧಿಕಾರಿಗಳಾಗಿ ಹಾಗೂ ಇಂಡಿ ಉಪ ವಿಭಾಗಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.