ADVERTISEMENT

ವಿಜಯಪುರ: ‘ನೂತನ ಶಿಕ್ಷಣ ನೀತಿ ಜ್ಞಾನದ ಮಹಾ ಶಕ್ತಿ’

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2021, 13:10 IST
Last Updated 14 ಸೆಪ್ಟೆಂಬರ್ 2021, 13:10 IST
ವಿಜಯಪುರ ನಗರದ ಶ್ರೀಮತಿ ಬಂಗಾರಮ್ಮ ಸಜ್ಜನ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಿಳಾ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು
ವಿಜಯಪುರ ನಗರದ ಶ್ರೀಮತಿ ಬಂಗಾರಮ್ಮ ಸಜ್ಜನ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಿಳಾ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು   

ವಿಜಯಪುರ: ವಿದ್ಯಾರ್ಥಿನಿಯರಿಗೆ ಭಾರತೀಯ ತತ್ವ, ಸಿದ್ಧಾಂತ, ಪರಂಪರೆ ಜೊತೆ ಜೊತೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದರ ಮೂಲಕ ಭಾರತವನ್ನು ಚಿರಸ್ಥಾಯಿಗೊಳಿಸಬಹುದಾಗಿದೆ ಎಂದು ಪ್ರಾಚಾರ್ಯರಾದ ಡಾ.ಆರ್. ಎಂ. ಮಿರ್ಧೆ ಹೇಳಿದರು.

ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಶ್ರೀಮತಿ ಬಂಗಾರಮ್ಮ ಸಜ್ಜನ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಿಳಾ ಮಹಾವಿದ್ಯಾಲಯದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿನಿಯರಿಗೆ ಗುಣ ಮಟ್ಟದ ಶಿಕ್ಷಣವನ್ನು ನೀಡುವುದರಿಂದ ಭಾರತವನ್ನು ಜಾಗತಿಕ ಜ್ಞಾನದ ಮಹಾ ಶಕ್ತಿಯಾಗಿ ಮತ್ತು ವಿಶ್ವನಾಗರಿಕರನ್ನಾಗಿ ರೂಪಿಸಬಹುದು ಎಂದರು.

ADVERTISEMENT

ನೂತನ ರಾಷ್ಟೀಯ ಶಿಕ್ಷಣ ನೀತಿಯು ವಿದ್ಯಾರ್ಥಿಗಳ ಸೃಜನಶೀಲತೆ ಗುರುತಿಸುವಲ್ಲಿ ಮತ್ತು ಪೋಷಿಸುವಲ್ಲಿ ಸಹಾಯವಾಗುತ್ತದೆ. ಇದರಿಂದ ಮಕ್ಕಳು ವಿಚಾರವಂತರು, ನೀತಿವಂತರಾಗುತ್ತಾರೆ. ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಲು ಉಪಯುಕ್ತವಾಗಿದೆ ಎಂದು ತಿಳಿಸಿದರು.

ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ.ಬಿ.ಬಿ.ಹಚಡದ, ಪ್ರೊ.ಆರ್.ಕೆಂಗನಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.