ADVERTISEMENT

ಬಿಎಸ್‌ವೈ ನಾಯಕತ್ವದಲ್ಲೇ ಮುಂದಿನ ಚುನಾವಣೆ: ಸಚಿವೆ ಶಶಿಕಲಾ ಜೊಲ್ಲೆ

​ಪ್ರಜಾವಾಣಿ ವಾರ್ತೆ
Published 9 ಜೂನ್ 2021, 11:29 IST
Last Updated 9 ಜೂನ್ 2021, 11:29 IST
ಶಶಿಕಲಾ ಜೊಲ್ಲೆ, ಪ್ರಜಾವಾಣಿ ಚಿತ್ರ
ಶಶಿಕಲಾ ಜೊಲ್ಲೆ, ಪ್ರಜಾವಾಣಿ ಚಿತ್ರ   

ವಿಜಯಪುರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿಯೇ ಬಿಜೆಪಿಯು ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆ ಎದುರಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಎಂಬುದು ಕೇವಲ ಊಹಾಪೋಹ. ಯಡಿಯೂರಪ್ಪ ಮುಖ್ಯಮಂತ್ರಿಯಾದ ನಂತರ ಎದುರಾದ ಪ್ರವಾಹ, ಕೊರೊನಾದಂತ ಸಂಕಷ್ಟದ ಸಮಯವನ್ನು ಸಮರ್ಥವಾಗಿ ಎದುರಿಸಲಾಗಿದೆ ಎಂದರು.

ಕೆಲವರು ಸುಳ್ಳು ಸುದ್ದಿ ಹರಡಿಸುತ್ತಿದ್ದಾರೆ. ಇಂತಹ ಸುಳ್ಳು ಸುದ್ದಿ ಹರಡುವವರ ವಿರುದ್ಧ ಸೂಕ್ತ ಸಂದರ್ಭದಲ್ಲಿ ಪಕ್ಷದ ಹೈಕಮಾಂಡ್‌ ಶಿಸ್ತುಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.