ADVERTISEMENT

ಆಲಮಟ್ಟಿ: ಮುಂದುವರಿದ ಹೊರಹರಿವು

1,07,573 ಕ್ಯೂಸೆಕ್ ಇದ್ದ ಒಳಹರಿವು 1,05,388 ಕ್ಯೂಸೆಕ್‌ಗೆ ಇಳಿಕೆ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2025, 4:44 IST
Last Updated 30 ಸೆಪ್ಟೆಂಬರ್ 2025, 4:44 IST
ಆಲಮಟ್ಟಿ ಜಲಾಶಯದ ಎಲ್ಲಾ 26 ಗೇಟ್‌ಗಳು ಹಾಗೂ ಜಲಾಶಯದ ಬಲಭಾಗದ ಆಲಮಟ್ಟಿ ವಿದ್ಯುತ್ ಉತ್ಪಾದನಾ ಘಟಕ ಸೇರಿ ಒಟ್ಟು 1.20 ಲಕ್ಷ ಕ್ಯೂಸೆಕ್ ನೀರನ್ನು ಸೋಮವಾರ ನದಿ ಪಾತ್ರಕ್ಕೆ ಹರಿಸಲಾಯಿತು
ಆಲಮಟ್ಟಿ ಜಲಾಶಯದ ಎಲ್ಲಾ 26 ಗೇಟ್‌ಗಳು ಹಾಗೂ ಜಲಾಶಯದ ಬಲಭಾಗದ ಆಲಮಟ್ಟಿ ವಿದ್ಯುತ್ ಉತ್ಪಾದನಾ ಘಟಕ ಸೇರಿ ಒಟ್ಟು 1.20 ಲಕ್ಷ ಕ್ಯೂಸೆಕ್ ನೀರನ್ನು ಸೋಮವಾರ ನದಿ ಪಾತ್ರಕ್ಕೆ ಹರಿಸಲಾಯಿತು   

ಆಲಮಟ್ಟಿ: ಇಲ್ಲಿನ ಜಲಾಶಯದಿಂದ ಭಾನುವಾರದಿಂದ ಹೊರಬಿಟ್ಟಿದ್ದ 1.20 ಲಕ್ಷ ಕ್ಯೂಸೆಕ್ ಪ್ರಮಾಣದಷ್ಟೇ ನೀರನ್ನು ಸೋಮವಾರವೂ ಹೊರಹರಿಸಲಾಗಿದೆ.

ಮಹಾರಾಷ್ಟ್ರ ಹಾಗೂ ಕರ್ನಾಟಕದ ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದ ಒಳಹರಿವು ಹೆಚ್ಚಿದೆ. ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುತ್ತಿದ್ದು, ಒಳಹರಿವು ಕೂಡಾ ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಸೋಮವಾರ ಬೆಳಿಗ್ಗೆ 1,07,573 ಕ್ಯೂಸೆಕ್ ಇದ್ದ ಒಳಹರಿವು ಸಂಜೆ 1,05,388 ಕ್ಯೂಸೆಕ್‌ಗೆ ಇಳಿಕೆಯಾಗಿದೆ.

ADVERTISEMENT

ಸದ್ಯಕ್ಕಿಲ್ಲ ನೆರೆ ಆತಂಕ: ‘ಒಳಹರಿವು ಕಡಿಮೆಯಾಗುತ್ತಿದ್ದು, ಸದ್ಯಕ್ಕೆ ಹೊರಹರಿವು ಹೆಚ್ಚು ಮಾಡುವ ಸಾಧ್ಯತೆಯಿಲ್ಲ ಎನ್ನಲಾಗಿದೆ. ಆಲಮಟ್ಟಿ ಜಲಾಶಯದಿಂದ 3.5 ಲಕ್ಷ ಕ್ಯೂಸೆಕ್‌ಗೂ ಅಧಿಕ ಪ್ರಮಾಣದಲ್ಲಿ ನೀರು ಹರಿಸಿದಾಗ ಮಾತ್ರ ಜಲಾಶಯದ ತಳಪಾತ್ರದಲ್ಲಿ ಹೊಲ, ಗದ್ದೆಗಳು ಜಲಾವೃತಗೊಳ್ಳುತ್ತವೆ. ಜಿಲ್ಲೆಯಲ್ಲಿ ಭೀಮೆ ಉಕ್ಕಿ ಹರಿಯುತ್ತಿದ್ದರೂ, ಕೃಷ್ಣೆ ಶಾಂತವಾಗಿದೆ. ಹೀಗಾಗಿ ಸದ್ಯಕ್ಕೆ ನೆರೆಯ ಆತಂಕ ಇಲ್ಲ ಎಂದು ಜಲಾಶಯದ ಮೂಲಗಳು ತಿಳಿಸಿವೆ.

519.60 ಮೀಟರ್‌ ಎತ್ತರದ ಜಲಾಶಯದಲ್ಲಿ 519.52 ಮೀ.ವರೆಗೆ ನೀರು ಸಂಗ್ರಹಿಸಲಾಗಿದೆ. 123.081 ಟಿಎಂಸಿ ಅಡಿ ಗರಿಷ್ಠ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 121.606 ಟಿಎಂಸಿ ಅಡಿ ನೀರು ಸಂಗ್ರಹವಿದೆ.

ಆಲಮಟ್ಟಿ ಜಲಾಶಯದ ಎಲ್ಲಾ 26 ಗೇಟ್ ಗಳು ಹಾಗೂ ಜಲಾಶಯದ ಬಲಭಾಗದ ಆಲಮಟ್ಟಿ ವಿದ್ಯುತ್ ಉತ್ಪಾದನಾ ಘಟಕ ಸೇರಿ 1.20 ಲಕ್ಷ ಕ್ಯೂಸೆಕ್ ನೀರನ್ನು ನದಿ ಪಾತ್ರಕ್ಕೆ ಹರಿಸುತ್ತಿರುವ ಸೋಮವಾರದ ದೃಶ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.