ಮುದ್ದೇಬಿಹಾಳ: ರಾಜ್ಯ ಸರ್ಕಾರವು ಕರ್ನಾಟಕ ಸಾರ್ವಜನಿಕ ಸುರಕ್ಷಿತ ಅಧಿನಿಯಮ-2017 ಜಾರಿಗೆ ತಂದಿದ್ದು ಇದರಡಿಯಲ್ಲಿ ಕಟ್ಟಡ, ವಾಣಿಜ್ಯ ಸಂಕೀರ್ಣಗಳಿಗೆ ಸುರಕ್ಷತೆಯ ದೃಷ್ಟಿಯಿಂದ ಸಿ.ಸಿ ಟಿವಿ ಕ್ಯಾಮೆರಾ ಅಳವಡಿಸಿಕೊಳ್ಳಬೇಕು ಎಂದು ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು.
ಪಟ್ಟಣದ ವಾಣಿಜ್ಯ ಮಳಿಗೆಗಳು, ಅಂಗಡಿಗಳಲ್ಲಿ ಸಿ.ಸಿ ಟಿವಿ ಕ್ಯಾಮೆರಾ ಅಳವಡಿಸುವ ಬಗ್ಗೆ ಶನಿವಾರ ವರ್ತಕರಿಗೆ ನೋಟಿಸ್ ನೀಡಿ ಅವರು ಮಾತನಾಡಿದರು.
‘ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಕ್ಯಾಮೆರಾ ಅಳವಡಿಸುವುದು, ಬೆಂಕಿ ನಂದಿಸುವ ಉಪಕರಣ ಅಳವಡಿಕೆ, ಭದ್ರತೆ ನೇಮಕ ಸೇರಿದಂತೆ ಹಲವು ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಲು ಸೂಚಿಸಲಾಗಿದೆ. ಸಿ.ಸಿ ಟಿವಿ ಕ್ಯಾಮೆರಾ ಅಳವಡಿಸದೇ ಇದ್ದರೆ ₹10 ಸಾವಿರ ರೂ.ದಂಡ ವಿಧಿಸಬಹುದಾಗಿದೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.