ADVERTISEMENT

ಕೋವಿಡ್‌ ಮುಂಚೂಣಿ ಕಾರ್ಯಕರ್ತರಿಗೆ ಮಾತ್ರ ಲಸಿಕೆ: ಜಿಲ್ಲಾಧಿಕಾರಿ ಸುನೀಲ್‌ ಕುಮಾರ್

​ಪ್ರಜಾವಾಣಿ ವಾರ್ತೆ
Published 22 ಮೇ 2021, 12:37 IST
Last Updated 22 ಮೇ 2021, 12:37 IST
ಪಿ.ಸುನೀಲ್‌ ಕುಮಾರ್
ಪಿ.ಸುನೀಲ್‌ ಕುಮಾರ್   

ವಿಜಯಪುರ: ಜಿಲ್ಲೆಯ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ಕಾರ್ಯಕರ್ತರಿಗೆ, ಕೋವಿಡ್‌ ಮುಂಚೂಣಿ ಕಾರ್ಯಕರ್ತರಿಗೆ ಹಾಗೂ 45 ವರ್ಷ ಮೇಲ್ಪಟ್ಟ ನಾಗರಿಕರಿಗೆ ಮಾತ್ರ ಕೋವಿಡ್‌ ಲಸಿಕೆಯನ್ನು ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್‌ ಕುಮಾರ್ ತಿಳಿಸಿದ್ದಾರೆ.

18 ರಿಂದ 44 ವರ್ಷದ ಸಾಮಾನ್ಯ ನಾಗರಿಕರಿಗೆ ಲಸಿಕೆಯನ್ನು ನೀಡುವ ಪ್ರಕ್ರಿಯೆಯನ್ನು ಸದ್ಯ ಸ್ಥಗಿತಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

18 ರಿಂದ 44 ವರ್ಷದ ಕೋವಿಡ್‌ ಮುಂಚೂಣಿ ಕಾರ್ಯಕರ್ತರಿಗೆ ಮಾತ್ರ ಮೊದಲನೇ ಡೋಸ್ ನೀಡಲು ಇಲಾಖಾವಾರು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.

ADVERTISEMENT

ಈ ನೋಡಲ್ ಅಧಿಕಾರಿಗಳು ಕೋವಿಡ್‌ ಮುಂಚೂಣಿ ಕಾರ್ಯಕರ್ತರ ಪಟ್ಟಿಯನ್ನು ತಯಾರಿಸಿ ಜಿಲ್ಲಾ ಆರ್. ಸಿ .ಎಚ್. ಅಧಿಕಾರಿಗಳಿಗೆ ಸಲ್ಲಿಸಬೇಕು ಹಾಗೂ ಪಟ್ಟಿಯಲ್ಲಿರುವ ಕೋವಿಡ್‌ ಮುಂಚೂಣಿ ಕಾರ್ಯಕರ್ತರಿಗೆ ಆಯಾ ನೋಡಲ್ ಅಧಿಕಾರಿಗಳು ನಿಗದಿತ ನಮೂನೆಯಲ್ಲಿ ದೃಢಿಕೃತ ಪ್ರಮಾಣ ಪತ್ರವನ್ನು ನೀಡಿ, ಆಯಾ ಇಲಾಖೆಗಳಿಗೆ ನಿಗದಿಪಡಿಸಿದ ದಿನಾಂಕ ಹಾಗೂ ಲಸಿಕಾ ಕೇಂದ್ರಕ್ಕೆ ತೆರಳಿ ಲಸಿಕೆಯನ್ನು ಪಡೆಯಲು ಸೂಚಿಸಬೇಕು. ಎಂದು ಹೇಳಿದ್ದಾರೆ.

ನಿಗದಿತ ನಮೂನೆಯಲ್ಲಿ ದೃಢೀಕೃತ ಪ್ರಮಾಣ ಪತ್ರವನ್ನು ಹೊಂದಿದವರಿಗೆ ಮಾತ್ರ ನಿಗದಿಪಡಿಸಿದ ಲಸಿಕಾ ಕೇಂದ್ರದಲ್ಲಿ ಲಸಿಕೆಯನ್ನು ನೀಡಲಾಗುತ್ತದೆ ಎಂದು ಅವರು ತಿಳಿಸಿದರು.

ಮುಂದಿನ ದಿನಗಳಲ್ಲಿ 18 ರಿಂದ 44 ವರ್ಷದ ಆದ್ಯತೆಯ ಗುಂಪಿನಲ್ಲಿರುವ ಇತರೆ ಇಲಾಖೆಗಳ ಅರ್ಹ ಫಲಾನುಭವಿಗಳಿಗೆ ಲಸಿಕೆಯನ್ನು ನೀಡಲಾಗುವುದು ಎಂದರು.

ಆದ್ಯತೆಯ ಗುಂಪಿನಲ್ಲಿ ಸೂಚಿಸಿರುವವರು ವಿನಾಕಾರಣ ಸರ್ಕಾರದ ಆದೇಶದ ಪ್ರತಿಯನ್ನು ತೆಗೆದುಕೊಂಡು ಪ್ರಸ್ತುತ ಚಾಲ್ತಿಯಲ್ಲಿರುವ ಲಸಿಕಾ ಕೇಂದ್ರಗಳಿಗೆ ತೆರಳಿ ಲಸಿಕೆಯನ್ನು ನೀಡಬೇಕು ಎಂದು ಒತ್ತಾಯ ಮಾಡಬಾರದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.