ವಿಜಯಪುರ: ‘ನಗರದ ಕಂದಗಲ್ ಹನುಮಂತರಾಯ್ ರಂಗಮಂದಿರದಲ್ಲಿ ಫೆ.24 ಹಾಗೂ 25 ರಂದು ಎರಡು ದಿನಗಳ ಕಾಲ 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದ್ದು, ಸಮ್ಮೇಳನ ಲಾಂಛನ ಅಂತಿಮಗೊಳಿಸಲಾಗಿದೆ. ಸರ್ವಾಧ್ಯಕ್ಷರನ್ನು ಜಿಲ್ಲೆಯ ಹಿರಿಯ ಸಾಹಿತಿಗಳು ಹಾಗೂ ಕಾರ್ಯಕಾರಣಿ ಸದಸ್ಯರು ಚರ್ಚಿಸಿ ಅಂತಿಮಗೊಳಿಸಲಾಗುವುದು’ ಎಂದು ಸಾಹಿತಿ ಸಂಗಮೇಶ ಮೇತ್ರಿ ಹೇಳಿದರು.
ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಗುರುವಾರ ನಡೆದ 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯ ಅನೇಕ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನು ಮುಕ್ತವಾಗಿ ಚರ್ಚಿಸಿ ಆಯ್ಕೆ ಮಾಡಲಾಗಿದ್ದು, ಜಿಲ್ಲಾ ಸಮ್ಮೇಳನವನ್ನು ಸಭೆಯಲ್ಲಿ ಚರ್ಚಿಸಿ ಆಯ್ಕೆ ಮಾಡಲಾಗುವುದು’ ಎಂದರು.
ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಮಾತನಾಡಿ, ‘ಪಾರದರ್ಶಕವಾಗಿ ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನದ ಸರ್ವಾಧ್ಯಕ್ಷರನ್ನು ಆಯ್ಕೆ ಮಾಡುತ್ತಾ ಬರಲಾಗಿದೆ. ಸಮ್ಮೇಳನದ ಲಾಂಛನವನ್ನು ಶುಕ್ರವಾರ ಅನಾವರಣ ಮಾಡಲಾಗುವುದು. ಇನ್ನು ಮೂರು ದಿನಗಳಲ್ಲಿ ಸರ್ವಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು’ ಎಂದರು.
ಅಭಿಷೇಕ ಚಕ್ರವರ್ತಿ, ಸುರೇಶ ಜತ್ತಿ, ಕಮಲಾ ಮುರಾಳ, ಸುಖದೇವಿ ಅಲಬಾಳಮಠ, ಜಯಶ್ರೀ ಹಿರೇಮಠ, ಸಿದ್ರಾಮಯ್ಯ ಲಕ್ಕುಂಡಿಮಠ, ರಾಜೇಸಾಬ ಶಿವನಗುತ್ತಿ, ಶಿಲ್ಪಾ ಭಸ್ಮೆ, ಅರ್ಜುನ ಶಿರೂರ, ಅಲ್ಲಮಪ್ರಭು ಮಲ್ಲಿಕಾರ್ಜುನಮಠ, ವಿಜಯಲಕ್ಷ್ಮಿ ಹಳಕಟ್ಟಿ, ರಾಜೇಶ್ವರಿ ಮೋಪಗಾರ, ಎಸ್.ಎಲ್ ಇಂಗಳೇಶ್ವರ, ಮಹಾದೇವಪ್ಪ ಮೋಪಗಾರ, ಸುರೇಶ ಕಾಗಲಕರ್, ಎಂ.ಎಸ್ ಮಾಗಣಗೇರಿ, ಭಾಗೀರಥಿ ಸಿಂಧೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.