ADVERTISEMENT

ನಿವೃತ್ತಿಗೆ ಬಿಸಿಯೂಟ ಕಾರ್ಮಿಕರ ವಿರೋಧ

​ಪ್ರಜಾವಾಣಿ ವಾರ್ತೆ
Published 26 ಮೇ 2022, 15:37 IST
Last Updated 26 ಮೇ 2022, 15:37 IST
ನಿವೃತ್ತಿ ಅಂಚಿನಲ್ಲಿರುವ ಬಿಸಿಯೂಟ ಕಾರ್ಮಿಕರಿಗೆ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ವಿಜಯಪುರ ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ ಅವರಿಗೆ ಮನವಿ ಸಲ್ಲಿಸಲಾಯಿತು
ನಿವೃತ್ತಿ ಅಂಚಿನಲ್ಲಿರುವ ಬಿಸಿಯೂಟ ಕಾರ್ಮಿಕರಿಗೆ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ವಿಜಯಪುರ ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ ಅವರಿಗೆ ಮನವಿ ಸಲ್ಲಿಸಲಾಯಿತು   

ವಿಜಯಪುರ: ನಿವೃತ್ತಿ ಅಂಚಿನಲ್ಲಿರುವ ಬಿಸಿಯೂಟ ಕಾರ್ಮಿಕರಿಗೆ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘ ಕರ್ನಾಟಕ ರಾಜ್ಯ ಘಟಕ,ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್‌ನಿಂದ ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ ಅವರಿಗೆ ಮನವಿ ಸಲ್ಲಿಸಲಾಯಿತು.

ಯಾವುದೇ ಪರಿಹಾರ ನೀಡದೇ 12 ಸಾವಿರ ಅಕ್ಷರ ದಾಸೋಹ ಕಾರ್ಮಿಕರನ್ನು ನಿವೃತ್ತಿಗೊಳಿಸಿ ಹೊರಡಿಸಿರುವ ಸರ್ಕಾರದ ಆದೇಶನ್ನು ಈ ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ನಿವೃತ್ತಿಯಾಗುವ ಅಕ್ಷರ ದಾಸೋಹ ಕಾರ್ಮಿಕರಿಗೆ ಜೀವನ ಯೋಗ್ಯ ನಿವೃತ್ತಿ ವೇತನ ಅಥವಾ ಕನಿಷ್ಠ ₹ 5 ಲಕ್ಷ ಇಡಿಗಂಟು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ADVERTISEMENT

ನಿವೃತ್ತಿಯಾಗುವ ಅಕ್ಷರ ದಾಸೋಹ ಕಾರ್ಮಿಕರು ಇಚ್ಚಿಸಿದಲ್ಲಿ ಅವರನ್ನೇ ಕೆಲಸದಲ್ಲಿ ಮುಂದುವರೆಸಿ, ಅಂಗನವಾಡಿ ಮಾದರಿಯಂತೆ ಅವರ ಹುದ್ದೆಯಲ್ಲಿ ಅವರ ಕುಟುಂಬದ ಸದಸ್ಯರನ್ನು ನೇಮಿಸಬೇಕು ಎಂದು ಆಗ್ರಹಿಸಿದರು.

ಎ.ಐ.ಯು.ಟಿ.ಯು.ಸಿ. ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಮಾತನಾಡಿ, 20 ವರ್ಷಗಳಿಂದ ಪುಡಿಗಾಸಿನ ವೇತನ ನೀಡಿ ದಿನವಿಡಿ ಸೇವೆ ತೆಗೆದುಕೊಂಡು ದಿಢೀರನೇ ಯಾವುದೇ ಪರಿಹಾರ ಇಲ್ಲದೆ ಬಿಸಿಯೂಟ ಕಾರ್ಯಕರ್ತೆಯರನ್ನು ಮನೆಗೆ ಕಳುಹಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಉಗ್ರವಾಗಿ ಖಂಡಿಸಿದರು.

ಜಿಲ್ಲಾ ಸಂಚಾಲಕರಾದಶಶಿಕಲಾ ಮ್ಯಾಗೇರಿ ಮಾತನಾಡಿ, ಇದೀಗ ನಮ್ಮನ್ನು ರಾಜ್ಯ ಸರ್ಕಾರವು 60 ವರ್ಷವಾಗಿವೆ ಎಂಬ ನೆಪವೊಡ್ಡಿ ಯಾವುದೇ ಪರಿಹಾರ ನೀಡದೇ ನಿವೃತ್ತಿ ಹೆಸರಿನಲ್ಲಿ ಸುಮಾರ 12ಸಾವಿರ ಬಿಸಿಯೂಟ ಕಾರ್ಮಿಕರನ್ನು ಮನೆಗೆ ಕಳಿಸಲು ಆದೇಶ ನೀಡಿದೆ. ಈ ಸರ್ಕಾರದ ನೀತಿಯನ್ನು ಇಡೀ ಬಿಸಿಯೂಟ ಕಾರ್ಯಕರ್ತೆಯರು ಪ್ರತಿಭಟಿಸಬೇಕು ಎಂದರು.

ಸಹಸಂಚಾಲಕರಾದ ಬಸಮ್ಮ ಬೋಳಿ,ಬಾನು ಕಲಾದಗಿ, ಕಮಲಾಬಾಯಿ ಪಾಟೀಲ, ಹಣಮವ್ವ ಛತ್ರಿ, ಸುನಂದಾ ಪರಡಿಮಠ, ಸಾವಿತ್ರಿ ನಾಟೀಕರ, ಸಾವಿತ್ರಿ ಕಾಮನಕೇರಿ, ರಾಜಬಿ ಚಪ್ಪರಬಂದ,ಚೆನ್ನಮ್ಮ ಪೆಂಟದ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.