ADVERTISEMENT

ವಿಜಯಪುರ: ಕೆರೆಗಳ ಒತ್ತುವರಿ ತೆರವಿಗೆ ಕ್ರಮ

ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2021, 15:54 IST
Last Updated 3 ಮಾರ್ಚ್ 2021, 15:54 IST
ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಬುಧವಾರ ನಡೆದ ಜಲಮೂಲಗಳ ಸಂರಕ್ಷಣೆ ಮತ್ತು ನಿರ್ವಹಣೆಗೆ ಸಂಬಂಧಿಸಿದ ತ್ರೈಮಾಸಿಕ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್ ಮಾತನಾಡಿದರು 
ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಬುಧವಾರ ನಡೆದ ಜಲಮೂಲಗಳ ಸಂರಕ್ಷಣೆ ಮತ್ತು ನಿರ್ವಹಣೆಗೆ ಸಂಬಂಧಿಸಿದ ತ್ರೈಮಾಸಿಕ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್ ಮಾತನಾಡಿದರು    

ವಿಜಯಪುರ: ಬಸವನ ಬಾಗೇವಾಡಿ ತಾಲ್ಲೂಕಿನ ಇಂಗಳೇಶ್ವರ, ಮಸಬಿನಾಳ ಹಾಗೂ ಹೂವಿನಹಿಪ್ಪರಗಿ ಕೆರೆಗಳ ಒತ್ತುವರಿ ಪ್ರಕರಣಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಬುಧವಾರಜಲಮೂಲಗಳ ಸಂರಕ್ಷಣೆ ಮತ್ತು ನಿರ್ವಹಣೆಗೆ ಸಂಬಂಧಿಸಿದ ತ್ರೈಮಾಸಿಕ ಸಭೆಯಲ್ಲಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿಗಳ ಹಂತದಲ್ಲಿ ಕೆರೆಗಳ ಸಂರಕ್ಷಣಾ ಸಮಿತಿ ರಚನೆ ಮಾಡಬೇಕಾಗಿದೆ. ಯಾವ ಗ್ರಾಮ ಪಂಚಾಯಿತಿಯಲ್ಲಿ ನೀರು ಬಳಕೆದಾರರ ಸಮಿತಿ ಇದೆಯೋ ಅದೇ ಸಮಿತಿಯನ್ನು ಕೆರೆಗಳ ಸಂರಕ್ಷಣಾ ಸಮಿತಿಯಾಗಿ ಪರಿಗಣಿಸಲು ಹಾಗೂ ಕುಂದುಕೊರತೆಗಳು ಪರಿಗಣಿಸಲು ಸರ್ಕಾರದ ಸಲಹೆ ಇರುತ್ತದೆ. ಕಾರಣ ಜಲಮೂಲಗಳ ಸಂರಕ್ಷಣೆಯಲ್ಲಿ ಗ್ರಾಮ ಪಂಚಾಯಿತಿಗಳೂ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ADVERTISEMENT

ಅತೀ ಕಲುಷಿತ ಜಲಮೂಲಗಳನ್ನು ಪತ್ತೆ ಹಚ್ಚಬೇಕು ಮತ್ತು ಕಾರ್ಖಾನೆಗಳಿಂದ ಹೊರಬರುವ ವಿಷಕಾರಿ ರಾಸಾಯನಿಕ ವಸ್ತುಗಳು ಜಲಮೂಲಗಳಿಗೆ ಸೇರದಂತೆ ಕ್ರಮವಹಿಸಿ, ಅದನ್ನು ಸ್ವಚ್ಛಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.

ಕೆರೆಗಳನ್ನು ಹೊರತುಪಡಿಸಿ ಕಲ್ಯಾಣಿ ಕುಂಟೆ, ಕಟ್ಟೆ, ಗೋಕಟ್ಟೆ ಇತ್ಯಾದಿ ಜಲಮೂಲಗಳನ್ನು ಗುರುತಿಸಬೇಕು ಮತ್ತು ಸರ್ವೆ ಮಾಡುಬೇಕು. ಅದರಂತೆ ಸ್ವಚ್ಛಗೊಳಿಸಬೇಕು ಎಂದು ಸೂಚಿಸಿದರು.

ಕೆರೆಗಳಿಗೆ ಸಂಬಂಧಿಸಿದಂತೆ ಕುಂದು ಕೊರತೆ ಸಮಿತಿಯನ್ನು ರಚಿಸಬೇಕು ಹಾಗೂ ಕುಂದು ಕೊರತೆಗಳ ಬಗ್ಗೆ ಸ್ಥಳೀಯ ಪ್ರಕಟಣೆ ನೀಡಬೇಕು. ಆನ್ ಲೈನ್ ಕುಂದುಕೊರತೆಗಳನ್ನು ದಾಖಲಿಸಲು ಎನ್. ಐ. ಸಿ. ಸಹಕಾರ ಪಡೆಯಬೇಕು. ಸಣ್ಣ ನೀರಾವರಿ ಮತ್ತು ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿ ಕೆರೆಗಳಿಗೆ ಸಂಘಗಳನ್ನು ಸ್ಥಾಪಿಸಬೇಕು ಎಂದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ, ಪರಿಸರ, ವಾಯುಮಾಲಿನ್ಯ ನಿಯಂತ್ರಣ ಇಲಾಖೆ, ಭೂಮಾಪನ ಇಲಾಖೆ, ಅಧಿಕಾರಿಗಳು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಜಲಾನಯನ ಅಭಿವೃದ್ಧಿ ಇಲಾಖೆ ಅಧಿಕಾರಿಗಳು, ವಿವಿಧ ತಾಲ್ಲೂಕುಗಳ ತಹಶೀಲ್ದಾರರು ಉಪಸ್ಥಿತರಿದ್ದರು.

****

ಕೆರೆಗಳಲ್ಲಿ ಹೂಳು ತೆಗೆದು ಸ್ವಚ್ಛಗೊಳಿಸಿ ನೀರಿನ ಗುಣಮಟ್ಟವನ್ನು ಕಾಪಾಡುವುದು ಹಾಗೂ ಅದನ್ನು ಪುನರ್ ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು

–ಪಿ.ಸುನೀಲ್‌ ಕುಮಾರ್‌

ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.