
ವಿಜಯಪುರ: ಕೇಂದ್ರ ಜಲಶಕ್ತಿ ಸಚಿವಾಲಯದ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿಶ್ವ ಶೌಚಾಲಯ ದಿನಾಚರಣೆಯ ಪ್ರಯುಕ್ತ ನವೆಂಬರ್ 19ರಿಂದ ಡಿಸೆಂಬರ್ 10ರ ವರೆಗೆ ‘ನಮ್ಮ ಶೌಚಾಲಯ - ನಮ್ಮ ಭವಿಷ್ಯ’ ಎಂಬ ಘೋಷ ವಾಕ್ಯದಡಿ ವಿಶೇಷ ಅಭಿಯಾನವನ್ನು ಆಯೋಜಿಸಲು ನಿರ್ದೇಶನ ನೀಡಿದ್ದು, ಈ ಅಭಿಯಾನವನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಿ ಎಂದು ಜಿ.ಪಂ. ಸಿಇಒ ರಿಷಿ ಆನಂದ್ ತಿಳಿಸಿದ್ದಾರೆ.
ಈ ಅಭಿಯಾನವು ಆರೋಗ್ಯ, ಘನತೆ ಮತ್ತು ಸಾಮಾಜಿಕ ಸಮೃದ್ಧಿಗಾಗಿ ನೈರ್ಮಲ್ಯ ಮತ್ತು ಸ್ವಚ್ಛತೆಯ ಪ್ರಾಮುಖ್ಯತೆಯ ಮೇಲೆ ಮಾತ್ರವಲ್ಲದೆ, ವೈಯಕ್ತಿಕ ಮನೆ ಶೌಚಾಲಯಗಳು ಮತ್ತು ಸಮುದಾಯದ ನೈರ್ಮಲ್ಯ ಸಂಕೀರ್ಣಗಳು ಎರಡಕ್ಕೂ ಒತ್ತು ನೀಡುತ್ತದೆ ಎಂದರು.
ಅಭಿಯಾನದ ಅವಧಿಯಲ್ಲಿ ಗ್ರಾಮ ಪಂಚಾಯಿತಿಗಳು, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿಗಳು ಒಗ್ಗೂಡಿ ಸಮುದಾಯ ಶೌಚಾಲಯ ಸಂಕೀರ್ಣಗಳ ಕಾರ್ಯಕ್ಷಮತೆ, ಕಾರ್ಯಾಚರಣೆ ಮತ್ತು ನಿರ್ವಹಣಾ ವ್ಯವಸ್ಥೆಗಳನ್ನು ಮೌಲ್ಯಮಾಪನ ಮಾಡಲು ಮತ್ತು ಹೆಚ್ಚಿಸಲು ಕ್ರಮವಹಿಸುವಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ವಿವಿಧ ಜನ ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಂಡು ಗ್ರಾಮೀಣ ಸಮುದಾಯದಲ್ಲಿ ಶೌಚಾಲಯ ಬಳಕೆ ಮತ್ತು ಉತ್ತಮ ನೈರ್ಮಲ್ಯ ಅಭ್ಯಾಸಗಳನ್ನು ಉತ್ತೇಜಿಸಲು ಕ್ರಮವಹಿಸಲು ತಿಳಿಸಿದರು.
ಸಮುದಾಯದ ಸ್ವಚ್ಛ ಆರೋಗ್ಯಕರ ಮತ್ತು ಉತ್ತಮ ಭವಿಷ್ಯಕ್ಕಾಗಿ ಸಂಪೂರ್ಣ ಸ್ವಚ್ಛತೆಯನ್ನು ಖಚಿತಪಡಿಸಿಕೊಳ್ಳಲು, ಗಣ್ಯ ವ್ಯಕ್ತಿಗಳು, ಹಿರಿಯ ನಾಗರಿಕರು, ಮಕ್ಕಳು, ಯುವಕರು, ಸ್ವ-ಸಹಾಯ ಗುಂಪುಗಳು ಒಳಗೊಂಡಿರುವ ಜನರ ಸಹಭಾಗಿತ್ವದ ಮೂಲಕ ಸಮುದಾಯಗಳಲ್ಲಿ ಕೇಂದ್ರೀಕೃತ ಜಾಗೃತಿ ಮೂಡಿಸುವ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳಲು ಕ್ರಮವಹಿಸಬೇಕು ಎಂದರು.
ಶೌಚಾಲಯ ಬಳಕೆ ಕಾರ್ಯ ಸಾಧ್ಯತೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯವಿರುವಲ್ಲಿ ಸಮುದಾಯ ಶೌಚಾಲಯಗಳು ಮತ್ತು ವೈಯಕ್ತಿಕ ಗೃಹ ಶೌಚಾಲಯಗಳನ್ನು ದುರಸ್ತಿ, ನಿರ್ವಹಣೆಯನ್ನು ಕೈಗೊಳ್ಳಲು ಸಮುದಾಯ, ವೈಯಕ್ತಿಕ ಕುಟುಂಬಗಳಿಗೆ ಪ್ರೋತ್ಸಾಹ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಈ ಆಂದೋಲನ ಆಯೋಜನೆಗೆ ಸಂಬಂಧಿಸಿದಂತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಈ ಅಭಿಯಾನದಲ್ಲಿ ಕ್ರೀಯಾಶೀಲತೆಯಿಂದ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು.
ಗ್ರಾಮ ಪಂಚಾಯಿತಿ ಹಂತದಲ್ಲಿ ಸ್ವಚ್ಛ, ಸುಂದರ ವೈಯಕ್ತಿಕ ಗೃಹ ಶೌಚಾಲಯ ಸ್ಪರ್ಧೆಯನ್ನು ಆಯೋಜಿಸಲಾಗುವುದು, ಅದೇ ರೀತಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಉತ್ತಮ ಸಮುದಾಯ ಶೌಚಾಲಯ ಸ್ಪರ್ಧೆಗಳನ್ನು ಆಯೋಜಿಸಿ, ತದನಂತರ, ಜಿಲ್ಲೆ ಮತ್ತು ತಾಲ್ಲೂಕು ಹಂತದಲ್ಲಿ ವಿಜೇತರಿಗೆ ಪುರಸ್ಕಾರಗಳನ್ನು ನೀಡಿ ಗೌರವಿಸಲಾಗುವುದು ಎಂದರು.
ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿಗಳು ಮೊದಲ ಆದ್ಯತೆಯಾಗಿ ಪರಿಗಣಿಸಬೇಕು, ಅದರ ವರದಿಯನ್ನು ಕೇಂದ್ರ ಜಲಶಕ್ತಿ ಸಚಿವಾಲಯದ ಪೋರ್ಟಲ್‍ನಲ್ಲಿ ನಮೂದಿಸಲು ಕ್ರಮವಹಿಸಿ ಎಂದು ಎಲ್ಲ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.
ಈ ಅಭಿಯಾನದಲ್ಲಿ ಗ್ರಾಮ ಪಂಚಾಯಿತಿಯ ಜೊತೆಗೆ ಎಲ್ಲಾ ಇಲಾಖೆಗಳ ಅಧಿಕಾರಿ ಸಿಬ್ಬಂದಿ ಯುವಕರು ಹಿರಿಯರು ಮಹಿಳೆಯರು ಸ್ವ-ಸಹಾಯ ಸಂಘದ ಸದಸ್ಯರು ಶಾಲಾ - ಕಾಲೇಜಗಳು ಸಾರ್ವಜನಿಕರು ತಮ್ಮ ಪರಿವಾರದೊಂದಿಗೆ ಭಾಗವಹಿಸಿ ಯಶಸ್ವಿಯಾಗಿಸಬೇಕುರಿಷಿ ಆನಂದ್‌ಸಿಇಒಜಿ.ಪಂ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.