ADVERTISEMENT

ದೇಶ ವಿರೋಧಿ ಚಟುವಟಿಕೆಗೆ ಪಾಕ್ ಹಣ: ಶಾಸಕ ಬಸನಗೌಡ ಪಾಟೀಲ ಯತ್ನಾಳ

​ಪ್ರಜಾವಾಣಿ ವಾರ್ತೆ
Published 27 ಜನವರಿ 2020, 12:59 IST
Last Updated 27 ಜನವರಿ 2020, 12:59 IST
ಬಸನಗೌಡ ಪಾಟೀಲ ಯತ್ನಾಳ
ಬಸನಗೌಡ ಪಾಟೀಲ ಯತ್ನಾಳ   

ವಿಜಯಪುರ: ‘ಪಾಪ್ಯುಲರ್ ಫ್ರಂಟ್‌ ಆಫ್ ಇಂಡಿಯಾ (ಪಿಎಫ್‌ಐ) ಸೇರಿದಂತೆ ವಿವಿಧ ಸಂಘಟನೆಗಳಿಗೆ ದೇಶವಿರೋಧಿ ಚಟುವಟಿಕೆಗಳಿಗಾಗಿ ಪಾಕಿಸ್ತಾನದಿಂದ ಹಣ ಹರಿದು ಬರುತ್ತಿದೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು.

ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ವಿದೇಶಗಳಿಂದ ಹಣ ಬರುವ ಎನ್‌ಜಿಒಗಳನ್ನು ಕೇಂದ್ರ ಸರ್ಕಾರ ಈಗಾಗಲೇ ರದ್ದು ಮಾಡಿದೆ. ಆದರೆ, ದೇಶವಿರೋಧಿ ಚಟುವಟಿಕೆಗಳನ್ನು ಗಮಿಸಿದರೆ, ವ್ಯವಸ್ಥಿತವಾಗಿ ಹಣ ಹರಿದು ಬರುತ್ತಿರುವುದು ಗೊತ್ತಾಗುತ್ತದೆ’ ಎಂದು ತಿಳಿಸಿದರು.

‘ದೇಶದಲ್ಲಿ ಅಶಾಂತಿ ಮೂಡಿಸಲು, ಗಲಭೆ ಉಂಟು ಮಾಡಲು, ಪೌರತ್ವ (ತಿದ್ದುಪಡಿ) ಕಾಯ್ದೆ ಜಾರಿಯನ್ನು ದುರ್ಬಲಗೊಳಿಸಲು ವ್ಯವಸ್ಥಿತವಾಗಿ ಹೀಗೆ ಮಾಡಲಾಗುತ್ತಿದೆ. ದೇಶದ ಜಾತ್ಯತೀತ ಪಕ್ಷಗಳೆಲ್ಲ ಸೇರಿ ಷಡ್ಯಂತ್ರ ನಡೆಸುತ್ತಿವೆ’ ಎಂದು ದೂರಿದರು.

ADVERTISEMENT

‘ಪಿಎಫ್‌ಐ, ಎಸ್‌ಡಿಪಿಐ ಸೇರಿದಂತೆ ಇತರ ದೇಶವಿರೋಧಿ ಸಂಘಟನೆಗಳನ್ನು ಕಾನೂನು ಅಡಿ ನಿಷೇಧಿಸಬೇಕು’ ಎಂದು ಒತ್ತಾಯಿಸಿದರು.

‘ಬಿಜೆಪಿ ಜೀನ್ಸ್ ಪಾಕಿಸ್ತಾನದಲ್ಲಿರಬಹುದು’ ಎಂಬ ಶಾಸಕ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ, ‘ಪಾಕಿಸ್ತಾನವೇ ಭಾರತದ ಜೀನ್ಸ್‌. ಭಾರತದ ಒಂದು ಭಾಗವೇ ಪಾಕಿಸ್ತಾನ, ಅಪಘಾನಿಸ್ತಾನ’ ಎಂದು ತಿರುಗೇಟು ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.