ADVERTISEMENT

ನಿಯಮ ಪಾಲಿಸದಿದ್ದರೆ ದಂಡ: ವೈ.ಎಸ್.ಪಾಟೀಲ

​ಪ್ರಜಾವಾಣಿ ವಾರ್ತೆ
Published 4 ಮೇ 2020, 13:51 IST
Last Updated 4 ಮೇ 2020, 13:51 IST
ವೈ.ಎಸ್‌.ಪಾಟೀಲ
ವೈ.ಎಸ್‌.ಪಾಟೀಲ   

ವಿಜಯಪುರ: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ ಓಡಾಡುವವರನ್ನು ಶಿಕ್ಷೆಗೆ ಒಳಪಡಿಸುವ ಜೊತೆಗೆ ಸ್ಥಳದಲ್ಲಿಯೇ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಎಚ್ಚರಿಕೆ ನೀಡಿದ್ದಾರೆ.

ಕೊರೊನಾ ಸೋಂಕು ಹರಡದಂತೆ ತಡೆಯಲು ಮುನ್ನೆಚ್ಚರಿಕೆಗಾಗಿ ಸಾರ್ವಜನಿಕರು ಅಂತರ ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ತಿಳಿಸಿದರು.

ಈ ಆದೇಶವನ್ನು ಉಲ್ಲಂಘಿಸಿದರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ₹200 ಮತ್ತು ಮಹಾನಗರ ಪಾಲಿಕೆ ಹೊರತುಪಡಿಸಿ ಇತರೆ ಪ್ರದೇಶಗಳಲ್ಲಿ ₹100 ದಂಡ ವಿಧಿಸಲಾಗುವುದು ಎಂದರು.

ADVERTISEMENT

ಈ ಕುರಿತಂತೆ ಸಬ್‍ ಇನ್‌ಸ್ಪೆಕ್ಟರ್, ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಕರು, ಪಿಡಿಒ ಅಥವಾ ಸರ್ಕಾರದಿಂದ ನಿಯೋಜಿತ ಅಧಿಕೃತ ಅಧಿಕಾರಿಗಳ ಮೂಲಕ ಈ ದಂಡ ವಿಧಿಸಲು ಅಧಿಕಾರ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಕೋವಿಡ್-19 ಲಾಕ್‍ಡೌನ್ ಅವಧಿಯನ್ನು ಮೇ 17ರ ವರೆಗೆ ವಿಸ್ತರಿಸಲಾಗಿದ್ದು, ಕೆಲವು ವಿನಾಯಿತಿ ನೀಡಲಾಗಿದೆ. ಸಾರ್ವಜನಿಕವಾಗಿ ಒಬ್ಬರಿಗಿಂತ ಹೆಚ್ಚು ಜನ ಗುಂಪುಗುಂಪಾಗಿ ಸೇರುವುದು ಕಂಡುಬಂದಲ್ಲಿ ಅಂತಹವರ ಮೇಲೂ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.