ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ ಪಟ್ಟಣದ ಶ್ರೀ ಅಭಿನವ ತಿರುಪತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ 11ನೇ ರಾಜ್ಯ ಪೆಂಕಾಕ್ ಸಿಲಾಸ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಾದ ಶಕುಂತಲಾ ಶಾರದಳ್ಳಿ ಟ್ಯಾಂಡಿಂಗ್ (ಫೈಟ್)25 ರಿಂದ 30 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ವಿಕ್ರಾಂತ ಶಾರದಳ್ಳಿ ಟ್ಯಾಂಡಿಂಗ್ (ಫೈಟ್) 20 ರಿಂದ 25 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗಳಿಸಿದ್ದಾರೆ ಎಂದು ತರಬೇತಿದಾರ ಶಿವಕುಮಾರ ಶಾರದಳ್ಳಿ ತಿಳಿಸಿದರು.
ಮುದ್ದೇಬಿಹಾಳದ ಬಿಎಎಸ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಈ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಟೂರ್ನಿಯ ಆಯೋಜಕ ಐಪಿಎಸ್‌ಎಫ್ ತಾಂತ್ರಿಕ ನಿರ್ದೇಶಕ ಅಬ್ದುಲ್ ರಜಾಕ್, ಐಪಿಎಸ್‌ಎಫ್ ಉಪಾಧ್ಯಕ್ಷ ವಿಜಯ ಹಂಚನಾಳ ಪ್ರಶಸ್ತಿ ಪ್ರದಾನ ಮಾಡಿದರು.
ವಿದ್ಯಾರ್ಥಿಗಳ ಸಾಧನೆಗೆ ಬಿಎಎಸ್ ಇಂಟರ್‌ನ್ಯಾಷನಲ್ ಸ್ಕೂಲ್ ಅಧ್ಯಕ್ಷ ಮಹಾಂತಗೌಡ ಬಿರಾದಾರ, ಪ್ರಾಚಾರ್ಯ ಸುಪರ್ಣದಾಸ್ , ಕಾರ್ಯದರ್ಶಿ ಎ.ಎಸ್.ಬಿರಾದಾರ, ಬಿಎಎಸ್ ಟ್ರಸ್ಟ್ ಆಡಳಿತಾಧಿಕಾರಿ ಪ್ರಭುಗೌಡ ಬಿರಾದಾರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.