ADVERTISEMENT

ಪಿಎಫ್ಐ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷನ ಬಂಧನ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2022, 3:02 IST
Last Updated 27 ಸೆಪ್ಟೆಂಬರ್ 2022, 3:02 IST
 ಆಶ್ಫಾಕ್ ಜಮಖಂಡಿ
ಆಶ್ಫಾಕ್ ಜಮಖಂಡಿ   

ವಿಜಯಪುರ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ಆಶ್ಫಾಕ್ ಜಮಖಂಡಿ ಮನೆ ಮೇಲೆ ಜಿಲ್ಲಾ ಪೊಲೀಸರು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿ, ಬಂಧಿಸಿದ್ದಾರೆ.

ಹಿಜಾಬ್, ಎನ್ ಆರ್ ಸಿ, ಸಿಎ ವಿರೋಧಿ ಹೋರಾಟ ಸಂಘಟಿಸಿದ ಮತ್ತು ಪಿಎಫ್ ಐ ಮುಖಂಡರ ಮನೆ ಮೇಲೆ ಇತ್ತೀಚೆಗೆ ನಡೆದ ಎನ್ ಐ ಎ ದಾಳಿ ವಿರೋಧಿಸಿ ಪ್ರತಿಭಟನೆ ನಡೆಸಿದ ಹಾಗೂ ಸಮಾಜದಲ್ಲಿ ಶಾಂತಿ ಕದಡುವ ಯತ್ನ ನಡೆಸಿರುವ ಹಿನ್ನೆಲೆಯಲ್ಲಿ ಆಶ್ಪಾಕ್ ಅವರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ 'ಪ್ರಜಾವಾಣಿ' ಗೆ ತಿಳಿಸಿದರು.

ವಶಕ್ಕೆ ಪಡೆಯಲಾಗಿರುವ ಆಶ್ಪಾಕ್ ಅವರನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವ ಪ್ರಕ್ರಿಯೆ ನಡೆದಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.