ವಿಜಯಪುರ: ಪೊಲೀಸ್ ಹುತಾತ್ಮರ ದಿನದ ಅಂಗವಾಗಿ ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಗೌರವ ನಮನ ಸಲ್ಲಿಸಲಾಯಿತು.
ಪೊಲೀಸ್ ಕವಾಯತ್ ತಂಡದಿಂದ ಮೂರು ಸುತ್ತು ಕುಶಾಲ ತೋಪುಗಳನ್ನು ಹಾರಿಸಿ, ಎರಡು ನಿಮಿಷ ಮೌನ ಆಚರಿಸುವ ಮೂಲಕ ಕರ್ತವ್ಯದ ವೇಳೆ ಈ ವರ್ಷ ದೇಶದಲ್ಲಿ ಮಡಿದ 264 ಪೊಲೀಸ್ ರಿಗೆ ಗೌರವ ನಮನ ಸಲ್ಲಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ಮಾತನಾಡಿ, ದೇಶದ ಗಡಿಯಲ್ಲಿ ಹಾಗೂ ದೇಶದೊಳಗೆ ಉಗ್ರರು, ನಕ್ಸಲೀಯರನ್ನು ಬಗ್ಗು ಬಡಿಯುವಾಗ ಹಾಗೂ ಕೋಮು ಗಲಭೆ ನಿಯಂತ್ರಿಸುವಾಗ, ಪ್ರಾಕೃತಿಕ ವಿಕೋಪಗಳ ವೇಳೆ ರಕ್ಷಣಾ ಕಾರ್ಯಾಚರಣೆ ನಡೆಸುವಾಗ ಜೀವ ಕಳೆದುಕೊಳ್ಳುತ್ತಿದ್ದ ಪೊಲೀಸರು ಈ ಬಾರಿ ಕೋವಿಡ್ ವಿರುದ್ಧವೂ ಹೋರಾಟ ನಡೆಸಿ, ಕರ್ತವ್ಯದ ವೇಳೆ ಜೀವ ತೆತ್ತಿದ್ದಾರೆ ಎಂದರು.
ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಗೋವಿಂದ ರೆಡ್ಡಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.