ADVERTISEMENT

ರಾಮಮಂದಿರ ಶಿಲಾನ್ಯಾಸಕ್ಕೆ ವಿರೋಧಿಸಿ ಪೋಸ್ಟ್‌‌: ಯುವಕನಿಗೆ ಚಪ್ಪಲಿ ಏಟು

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2020, 11:41 IST
Last Updated 7 ಆಗಸ್ಟ್ 2020, 11:41 IST
ಯುವಕನನ್ನು ಥಳಿಸುತ್ತಿರುವ ಸಾರ್ವಜನಿಕರು
ಯುವಕನನ್ನು ಥಳಿಸುತ್ತಿರುವ ಸಾರ್ವಜನಿಕರು    

ವಿಜಯಪುರ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿರುವುದನ್ನು ವಿರೋಧಿಸಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಾರಿ ಪೋಸ್ಟ್ ಹಾಕಿದ ಮುಸ್ಲಿಂ ಯುವಕನಿಗೆ ಸಾರ್ವಜನಿಕರು ಚಪ್ಪಲಿಯಿಂದ ಹೊಡೆದು, ಕ್ಷಮೆ ಕೇಳಿಸಿರುವ ಘಟನೆ ಬಸವನಬಾಗೇವಾಡಿ ತಾಲ್ಲೂಕಿನ ಯಾಳವಾರ ಗ್ರಾಮದಲ್ಲಿ ನಡೆದಿದೆ.

ಯುವಕನಿಂದ ‘ಜೈ ಶ್ರೀರಾಮ್’ ಎಂದು ಘೋಷಣೆ ಹೇಳಿಸಿ, ದೇವರಿಗೆ ಕೈಮುಗಿಯಿಸಿದ್ದಾರೆ. ಬಳಿಕ ಗ್ರಾಮದ ಹಿರಿಯರ ಸಮ್ಮುಖದಲ್ಲಿ ಸಮಸ್ಯೆ ಇತ್ಯರ್ಥ ಪಡಿಸಿದ್ದಾರೆ. ಮುಂದೆ ಈ ರೀತಿ ಮಾಡಬಾರದೆಂದು ಯುವಕನಿಗೆ ಬುದ್ದಿ ಮಾತು ಹೇಳಿ ಬಿಟ್ಟಿದ್ದಾರೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಯುವಕನಿಗೆ ಥಳಿಸಿರುವ ಮತ್ತು ಕ್ಷಮೆ ಕೇಳಿಸಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.