ಸಿಂದಗಿ: ‘ಪ್ರಜಾವಾಣಿ’ ದಿನಪತ್ರಿಕೆಯು ವಿದ್ಯಾರ್ಥಿ ವಿದ್ಯಾರ್ಥಿ ಸ್ನೇಹಿಯಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಚಲಿತ ವಿದ್ಯಮಾನ, ಸಾಮಾನ್ಯ ಜ್ಞಾನಕ್ಕೆ ನಿಖರವಾದ ಜ್ಞಾನ ಒದಗಿಸುವ ಪತ್ರಿಕೆಯಾಗಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹಾಂತೇಶ ಯಡ್ರಾಮಿ ಹೇಳಿದರು.
ಇಲ್ಲಿಯ ಜ್ಞಾನಭಾರತಿ ವಿದ್ಯಾಮಂದಿರದಲ್ಲಿ ವಿದ್ಯಾರ್ಥಿಗಳಿಗೆ ಮಂಗಳವಾರ ‘ಪ್ರಜಾವಾಣಿ’ ಎಸ್‌ಎಸ್‌ಎಲ್‌ಸಿ ಪರೀಕ್ಷೆ ದಿಕ್ಸೂಚಿ ಪತ್ರಿಕೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ವಿದ್ಯಾರ್ಥಿಗಳು ಪ್ರತಿದಿನ ‘ಪ್ರಜಾವಾಣಿ’ ಪತ್ರಿಕೆ ಓದಬೇಕು. ಜ್ಞಾನ ಶಕ್ತಿ ಹೆಚ್ಚಿಸಿಕೊಳ್ಳಲು, ಭಯಮುಕ್ತವಾಗಿ ಪರೀಕ್ಷೆ ಎದುರಿಸಲು ಇದು ಸಹಾಯಕ ಆಗಿದೆ. ವಿದ್ಯಾರ್ಥಿಗಳಿಗಾಗಿ ‘ಪ್ರಜಾವಾಣಿ’ ಪತ್ರಿಕೆಯು ರಿಯಾಯಿತಿ ದರದಲ್ಲಿ ದೊರೆಯುತ್ತದೆ. ಇದರ ಸದುಪಯೋಗ ಪಡೆಯಬೇಕು’ ಎಂದು ತಿಳಿಸಿದರು.
‘ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮೀಪಿಸಿದ್ದು, ವಿದ್ಯಾರ್ಥಿಗಳು ಓದಿನತ್ತ ಹೆಚ್ಚು ಗಮನಹರಿಸಬೇಕು. ಪರೀಕ್ಷೆಯಲ್ಲಿ ನಕಲು ಮಾಡಿ ಉತ್ತೀರ್ಣರಾದರೆ ಭವಿಷ್ಯದಲ್ಲಿ ಪಶ್ಚಾತ್ತಾಪ ಪಡುವ ಸಂದರ್ಭ ಉಂಟಾಗುತ್ತದೆ. ಈ ಬಾರಿಯ ಪರೀಕ್ಷೆಗಳನ್ನು ಇನ್ನೂ ಬಿಗಿಗೊಳಿಸಲು ವೆಬ್ ಕಾಸ್ಟಿಂಗ್ ಜೊತೆಗೆ ಜಾಮರ್ ಅಳವಡಿಸಲಾಗುತ್ತದೆ’ ಎಂದು ಹೇಳಿದರು.
ಮುಖ್ಯ ಶಿಕ್ಷಕ ಜಗದೀಶ ಪಾಟೀಲ ಮಾತನಾಡಿ, ‘ಪ್ರಜಾವಾಣಿ’ಯು ಕೇವಲ ಪತ್ರಿಕೆಯಾಗಿರದೇ ಜ್ಞಾನಕೋಶವಾಗಿದೆ. ವಿದ್ಯಾರ್ಥಿಗಳಿಗೆ ತುಂಬಾ ಉಪಯುಕ್ತವಾದ ಪತ್ರಿಕೆ’ ಎಂದು ಪ್ರಶಂಸಿದರು.
ವಿದ್ಯಾಮಂದಿರದ ಕಾರ್ಯದರ್ಶಿ ಸತೀಶ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಸಮಿತಿ ಕಾರ್ಯದರ್ಶಿ ಸತೀಶ ಹಿರೇಮಠ, ‘ಪ್ರಜಾವಾಣಿ’ ಪ್ರಸರಣ ವಿಭಾಗದ ವ್ಯವಸ್ಥಾಪಕ ಶ್ರೀಶೈಲ ಬಿದರಿ, ತಾಲ್ಲೂಕು ವರದಿಗಾರ ಶಾಂತೂ ಹಿರೇಮಠ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.