ನಾಲತವಾಡ: ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು, ಮಕ್ಕಳು ಕೂಡ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ಟಕ್ಕಳಕಿ ಇಂಗಳಗಿ ಸರ್ಕಾರಿ ಶಾಲೆಯ ಮುಖ್ಯಗುರು ಎಚ್.ಜಿ.ಗೌರೋಜಿ ಹೇಳಿದರು.
ಟಕ್ಕಳಕಿ ಇಂಗಳಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಬುಧವಾರ ಏರ್ಪಡಿಸಿದ್ದ ಕ್ಲಸ್ಟರ್ ಮಟ್ಟದ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರ ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪ್ರತಿಭಾ ಕಾರಂಜಿ, ಮಕ್ಕಳ ಮೇಳ, ಕ್ರಿಡಾ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಮಕ್ಕಳು ತಮ್ಮಲ್ಲಿರುವ ಕಲೆಯನ್ನು ಪ್ರದರ್ಶಿಸಬೇಕು ಎಂದರು.
ರಕ್ಕಸಗಿ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಎಸ್.ಎಂ.ವಿ. ನೂಲಿನವರ ಮಾತನಾಡಿ, ಪ್ರತಿಯೊಂದು ಮಗುವಿನಲ್ಲೂ ಒಂದಲ್ಲ ಒಂದು ಸಾಂಸ್ಕೃತಿಕ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ, ಪ್ರೋತ್ಸಾಯಿಸಬೇಕು ಎಂದರು.
ಮುಖಂಡ ಶಶಿ ಬಂಗಾರಿ, ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಮುದ್ನೂರ ಮಾತನಾಡಿದರು.
ಬಿ.ಎಸ್.ಸೇಕಣ್ಣವರ, ಎಸ್.ಸಿ.ಸಜ್ಜನ, ರೇಣುಕಾ ಹಿರೇಮಠ, ಸೋಮಪ್ಪ ವಾಲಿಕಾರ, ಎಸ್.ಎಸ್.ನಾಗರಬೆಟ್ಟ, ಎಚ್.ಜಿ.ಗೌರೋಜಿ, ಎಂ.ಸಿ.ಹವಲ್ದಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ಚಂದ್ರಶೇಖರ ಕತ್ತಿ, ರತ್ನಮ್ಮ ರಾ.ಮೇಟಿ ಹಾಗೂ ಕ್ಲಸ್ಟರ್‌ನ ಮುಖ್ಯಗುರುಗಳು, ಮಕ್ಕಳು, ಶಿಕ್ಷಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.