ADVERTISEMENT

‘ಮಕ್ಕಳ ಪ್ರತಿಭೆಗೆ ವೇದಿಕೆ’

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2019, 10:47 IST
Last Updated 10 ಆಗಸ್ಟ್ 2019, 10:47 IST
ಮನಗೂಳಿಯ ಆರ್.ಎಂ.ಗುಂಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ಆಯೋಜಿಸಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು
ಮನಗೂಳಿಯ ಆರ್.ಎಂ.ಗುಂಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ಆಯೋಜಿಸಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು   

ಮನಗೂಳಿ: ‘ಪ್ರತಿಭಾ ಕಾರಂಜಿಯು ಮಕ್ಕಳ ಪ್ರತಿಭೆಗೆ ವೇದಿಕೆಯಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಚಂದ್ರಶೇಖರಗೌಡ ಪಾಟೀಲ ಹೇಳಿದರು.

ಪಟ್ಟಣದ ಸಮೂಹ ಸಂಪನ್ಮೂಲ ಕೇಂದ್ರ–1ರಿಂದ ಆರ್.ಎಂ.ಗುಂಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ಏರ್ಪಡಿಸಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಪ್ರತಿಭಾ ಕಾರಂಜಿಯು ಮಕ್ಕಳ ಆಸಕ್ತಿಗಳನ್ನು ಅನಾವರಣಗೊಳಿಸಲು ಸೂಕ್ತ ವೇದಿಕೆಯಾಗಿದೆ. ಮಕ್ಕಳು ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಪ್ರಾಸ್ತಾವಿಕವಾಗಿ ಮಾತನಾಡಿದ ಸಮೂಹ ಸಂಪನ್ಮೂಲ ವ್ಯಕ್ತಿ ಚಿದಾನಂದ ಎಸ್.ಬಾಗೇವಾಡಿ, ‘ನಿಷ್ಪಕ್ಷಪಾತವಾಗಿ ಎಲ್ಲಾ ಸ್ಪರ್ಧೆಗಳನ್ನು ನಡೆಸಿ, ಮಕ್ಕಳಿಗೆ ನ್ಯಾಯ ಸಮ್ಮತ ನಿರ್ಣಯವನ್ನು ನೀಡಬೇಕು’ ಎಂದರು.

ಸಂಗನಬಸವ ಶಿವಾಚಾರ್ಯ ಸಾನ್ನಿಧ್ಯ ವಹಿಸಿದ್ದರು. ರೇವಣಸಿದ್ಧ ಮಣೂರ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಸಂಯೋಜಕ ಟಿ.ಎ.ಯರಗುದ್ರಿ, ಕೌಟಿಲ್ಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಠ್ಠಲ ಗಣಿ ಇದ್ದರು.

15 ಶಾಲೆಗಳ ಸುಮಾರು 25 ಜನ ಶಿಕ್ಷಕರು, 20 ಜನ ನಿರ್ಣಾಯಕರು ಹಾಗೂ 250 ಜನ ವಿದ್ಯಾರ್ಥಿಗಳು ಹಾಜರಿದ್ದರು.

ಚಂದ್ರು ಮಾಗಣಗೇರಿ ಸ್ವಾಗತಿಸಿದರು. ಡಾ.ಮಾಧವ ಗುಡಿ ನಿರೂಪಿಸಿ, ಬಸವರಾಜ ದಂಡವತೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.