ADVERTISEMENT

ಕೋವಿಡ್‌ ಲಸಿಕೆ 2ನೇ ಡೋಸ್ ಪಡೆಯುವವರಿಗೆ ಆದ್ಯತೆ: ಡಿಸಿ

​ಪ್ರಜಾವಾಣಿ ವಾರ್ತೆ
Published 5 ಮೇ 2021, 13:15 IST
Last Updated 5 ಮೇ 2021, 13:15 IST
ಪಿ.ಸುನೀಲ್‌ ಕುಮಾರ್
ಪಿ.ಸುನೀಲ್‌ ಕುಮಾರ್   

ವಿಜಯಪುರ: ಸರ್ಕಾರದ ಮಾರ್ಗಸೂಚಿ ಪ್ರಕಾರ ಮೇ 6ರಿಂದಕೋವಿಡ್- 19 ಲಸಿಕೆ ಎರಡನೇ ಡೋಸ್ ಪಡೆಯಲು ಅರ್ಹವಿರುವ ಆರೋಗ್ಯ ಕಾರ್ಯಕರ್ತರಿಗೆ, ಮುಂಚೂಣಿ ಕಾರ್ಯಕರ್ತರಿಗೆ ಹಾಗೂ 45 ವರ್ಷ ಮೇಲ್ಪಟ್ಟ ನಾಗರಿಕರಿಗೆ ಶೇ 70ರಷ್ಟು ಆದ್ಯತೆ ನೀಡಲಾಗುವುದು ಹಾಗೂ ಇನ್ನುಳಿದಂತೆ ಶೇ 30 ರಷ್ಟು ಆದ್ಯತೆಯನ್ನು 45 ವರ್ಷ ಮೇಲ್ಪಟ್ಟ ನಾಗರಿಕರಿಗೆ ಲಸಿಕೆಯ ಮೊದಲ ಡೋಸ್ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್ ತಿಳಿಸಿದ್ದಾರೆ.

ಕೋವಿಡ್‌ ಲಸಿಕೆ ಎರಡನೇ ಡೋಸ್ ಅರ್ಹವಿರುವ ಫಲಾನುಭವಿಗಳು ಮತ್ತು ಇನ್ನುಳಿದಂತೆ ಮೊದಲನೆಯ ಡೋಸ್ ಪಡೆಯುವ 45 ವರ್ಷ ಮೇಲ್ಪಟ್ಟ ನಾಗರಿಕರು ಜಿಲ್ಲೆಯಲ್ಲಿನ ಜಿಲ್ಲಾ ಆಸ್ಪತ್ರೆ, ಎಲ್ಲ ತಾಲ್ಲೂಕು ಆಸ್ಪತ್ರೆ, ಎಲ್ಲ ಸಮುದಾಯ ಆರೋಗ್ಯ ಕೇಂದ್ರಗಳು, ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಎಲ್ಲ ನಗರ ಆರೋಗ್ಯ ಕೇಂದ್ರಗಳಿಗೆ ತೆರಳಿ ಲಸಿಕೆಯನ್ನು ಪಡೆಯಬೇಕು ಎಂದು ಅವರು ತಿಳಿಸಿದ್ದಾರೆ.

ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲೆಯಲ್ಲಿ 18 ರಿಂದ 44 ವರ್ಷದ ನಾಗರಿಕರಿಗೆ ಕೋವಿಡ್‌ ಲಸಿಕೆಯನ್ನು ನೀಡಲಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಸರ್ಕಾರ ನೀಡುವ ನಿರ್ದೇಶನ ಹಾಗೂ ಮಾರ್ಗಸೂಚಿಗಳಂತೆ 18 -44 ವರ್ಷದ ನಾಗರಿಕರಿಗೆ ಲಸಿಕೆಯನ್ನು ನೀಡಲಾಗುವುದು ಎಂದು ಹೇಳಿದ್ದಾರೆ.

ADVERTISEMENT

18-44 ವರ್ಷದ ನಾಗರಿಕರು ಲಸಿಕೆಗಾಗಿ ಲಸಿಕಾ ಕೇಂದ್ರಗಳಿಗೆ ತೆರಳಬಾರದು ಎಂದು ಸಾರ್ವಜನಿಕರಲ್ಲಿ ಅವರು ಮನವಿ ಮಾಡಿದ್ದಾರೆ.

****

ನಾಲ್ಕು ಸಾವು; 452 ಜನರಿಗೆ ಸೋಂಕು

ವಿಜಯಪುರ: ಜಿಲ್ಲೆಯಲ್ಲಿ ಬುಧವಾರ ಕೋವಿಡ್‌ನಿಂದ ನಾಲ್ಕು ಜನ ಸಾವಿಗೀಡಾಗಿದ್ದು, 452 ಜನರು ಹೊಸದಾಗಿ ಸೋಂಕಿತರಾಗಿದ್ದಾರೆ.

ವಿಜಯಪುರ ನಗರದಲ್ಲಿ 200, ವಿಜಯಪುರ ಗ್ರಾಮೀಣ 19, ಬಬಲೇಶ್ವರ 7, ಬಸವನ ಬಾಗೇವಾಡಿ 12, ಕೊಲ್ಹಾರ 12, ನಿಡಗುಂದಿ 2, ಇಂಡಿ 34, ಮುದ್ದೇಬಿಹಾಳ 67, ತಾಳಿಕೋಟೆ 15, ಸಿಂದಗಿ 41, ದೇವರ ಹಿಪ್ಪರಗಿ 23 ಮತ್ತು ಇತರೆ ಜಿಲ್ಲೆಯ 12 ಜನರಿಗೆ ಸೋಂಕು ತಗುಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.