ADVERTISEMENT

ಸಾವಯವ ಕೃಷಿಗೆ ಆದ್ಯತೆ: ವಿಜುಗೌಡ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2021, 14:06 IST
Last Updated 15 ಆಗಸ್ಟ್ 2021, 14:06 IST
ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ  ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಂಸ್ಥೆ ಅಧ್ಯಕ್ಷ ವಿಜುಗೌಡ ಎಸ್. ಪಾಟೀಲ  ಧ್ವಜಾರೋಹಣ ನೇರವೇರಿಸಿದರು
ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ  ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಂಸ್ಥೆ ಅಧ್ಯಕ್ಷ ವಿಜುಗೌಡ ಎಸ್. ಪಾಟೀಲ  ಧ್ವಜಾರೋಹಣ ನೇರವೇರಿಸಿದರು   

ವಿಜಯಪುರ: ಗುಣಮಟ್ಟದ ಬಿತ್ತನೆ ಬೀಜ ಮತ್ತು ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಎಸ್ ಪಾಟೀಲ ಹೇಳಿದರು.

ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೇರವೇರಿಸಿ ಅವರು ಮಾತನಾಡಿದರು.

ದೇಶದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದ ಗುಣಗಳನ್ನು ಯುವ ಪೀಳಿಗೆಯು ಜೀವನದಲ್ಲಿ ಅಳವಡಿಸಿಕೊಂಡು, ದೇಶದ ಅಭಿವೃದ್ಧಿಗೆ ಕಾರಣಕರ್ತರಾಗಬೇಕು ಎಂದು ತಿಳಿಸಿದರು.

ADVERTISEMENT

ಕೃಷಿ ಉತ್ಪಾದನೆ ಹಾಗೂ ಉತ್ಪಾದಕತೆ ಹೆಚ್ಚಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಕರೆ ನೀಡಿದರು.

ಸಂಸ್ಥೆಯ ನಿರ್ದೇಶಕ ಕರುಣಾಕರ ಶೆಟ್ಟಿ ಹಾಗೂ ಜಂಟಿ ನಿರ್ದೇಶಕ ಲಕ್ಷ್ಮಣ ಎಸ್. ಕಳೊನ್ನವರ ಮತ್ತು ಸಂಸ್ಥೆಯ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.