ADVERTISEMENT

ಜಿಎಸ್‌ಟಿ ಸಮಸ್ಯೆ ಬಗೆಹರಿಸಲು ಆದ್ಯತೆ: ಸಚಿವ ಎಂ.ಬಿ.ಪಾಟೀಲ

ಶಾಮಿಯಾನ ಮಳಿಗೆಗಳ ವಸ್ತು ಪ್ರದರ್ಶನ, ವಿಜಯಪುರ 4ನೇ ಮಹಾ ಅಧಿವೇಶನ

​ಪ್ರಜಾವಾಣಿ ವಾರ್ತೆ
Published 19 ಜುಲೈ 2025, 5:47 IST
Last Updated 19 ಜುಲೈ 2025, 5:47 IST
ವಿಜಯಪುರದಲ್ಲಿ ನಡೆದ ಉತ್ತರ ಕರ್ನಾಟಕ ಶಾಮಿಯಾನಾ ಸಪ್ಲೈಯರ್ಸ್, ಲೈಟಿಂಗ್, ಧ್ವನಿವರ್ಧಕ ಹಾಗೂ ಡೆಕೋರೇಶನ್ ಮಾಲೀಕರ ಕ್ಷೇಮಾಭಿವೃದ್ಧಿ ಸಂಘದಿಂದ ಆಯೋಜಿಸಿದ್ದ ಶಾಮಿಯಾನ ಮಳಿಗೆಗಳ ವಸ್ತು ಪ್ರದರ್ಶನವನ್ನು ಸಚಿವ ಎಂ. ಬಿ. ಪಾಟೀಲ ಉದ್ಘಾಟಿಸಿದರು  
ವಿಜಯಪುರದಲ್ಲಿ ನಡೆದ ಉತ್ತರ ಕರ್ನಾಟಕ ಶಾಮಿಯಾನಾ ಸಪ್ಲೈಯರ್ಸ್, ಲೈಟಿಂಗ್, ಧ್ವನಿವರ್ಧಕ ಹಾಗೂ ಡೆಕೋರೇಶನ್ ಮಾಲೀಕರ ಕ್ಷೇಮಾಭಿವೃದ್ಧಿ ಸಂಘದಿಂದ ಆಯೋಜಿಸಿದ್ದ ಶಾಮಿಯಾನ ಮಳಿಗೆಗಳ ವಸ್ತು ಪ್ರದರ್ಶನವನ್ನು ಸಚಿವ ಎಂ. ಬಿ. ಪಾಟೀಲ ಉದ್ಘಾಟಿಸಿದರು     

ವಿಜಯಪುರ: ‘ಜಗತ್ತಿನಲ್ಲಿ ಉದ್ಯೋಗ ಸೃಷ್ಟಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದಿದೆ. ಈ ಕ್ಷೇತ್ರದ ಬೇಡಿಕೆಗಳಿಗೆ ಸ್ಪಂದಿಸಲು ಸಣ್ಣ ಕೈಗಾರಿಕೆ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ನಗರದ ಆಲಕುಂಟೆ ನಗರದ ರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಉತ್ತರ ಕರ್ನಾಟಕ ಶಾಮಿಯಾನಾ ಸಪ್ಲೈಯರ್ಸ್, ಲೈಟಿಂಗ್, ಧ್ವನಿವರ್ಧಕ ಹಾಗೂ ಡೆಕೋರೇಶನ್ ಮಾಲೀಕರ ಕ್ಷೇಮಾಭಿವೃದ್ಧಿ ಸಂಘದಿಂದ ಶುಕ್ರವಾರ ಆಯೋಜಿಸಿದ್ದ ಶಾಮಿಯಾನ ಮಳಿಗೆಗಳ ವಸ್ತು ಪ್ರದರ್ಶನ ಮತ್ತು ವಿಜಯಪುರ 4ನೇ ಮಹಾ ಅಧಿವೇಶನ ಉದ್ಘಾಟಿಸಿ ಅವರು ಮಾತನಾಡಿದರು.

‘ಶಾಮಿಯಾನ ಸಂಘದವರನ್ನು ಬೆಳೆಸಲು ಮತ್ತು ಅವರಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಸರ್ಕಾರದ ಯೋಜನೆಗಳನ್ನು ಅವರಿಗೆ ತಲುಪಿಸಲಾಗುವುದು’ ಎಂದರು.

ADVERTISEMENT

‘ಶಾಮಿಯಾನ ಮಾಲೀಕರು ಮತ್ತು ಕಾರ್ಮಿಕರು ಹಗಲು ಮತ್ತು ರಾತ್ರಿ ಒತ್ತಡಗಳ ಮಧ್ಯೆ ಕೆಲಸ ಮಾಡುತ್ತಾರೆ. ಅವರು ಶ್ರಮಜೀವಿಗಳಾಗಿದ್ದು, ಶಿಸ್ತು, ಬದ್ಧತೆಯಿಂದ ಕೆಲಸ ಮಾಡುತ್ತಿದ್ದಾರೆ. ಇಂದಿನ ಆಧುನಿಕತೆ ತಕ್ಕಂತೆ ಮಾಲೀಕರು ಮತ್ತು ಕಾರ್ಮಿಕರು ವೃತ್ತಿಕೌಶವನ್ನು ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.

‘ಜಿ.ಎಸ್.ಟಿ ಸಮಸ್ಯೆ ಬಗೆಹರಿಸುವಂತೆ ಶಾಮಿಯಾನ ಸಂಘದವರು ಮಾಡಿದ ಮನವಿಗೆ ಪ್ರತಿಕ್ರಿಯೆ ನೀಡಿದ ಸಚಿವ ಎಂ.ಬಿ. ಪಾಟೀಲ ಅವರು, ಈ ಕುರಿತು ಮುಖ್ಯಮಂತ್ರಿ ಗಮನಕ್ಕೆ ತಂದು ಕೇಂದ್ರ ಸರ್ಕಾರದ ಗಮನ ಸೆಳೆಯಲಾಗುವುದು’ ಎಂದು ಭರವಸೆ ನೀಡಿದರು.

ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ, ಗೊಳಸಾರದ ಅಭಿನವ ಪುಂಡಲಿಂಗ ಮಹಾಶಿವಯೋಗಿಗಳು, ಶ್ರದ್ಧಾನಂದ ಸ್ವಾಮೀಜಿ, ಶಾಮಿಯಾನ ಮಾಲೀಕರ ಸಂಘದ ಅಮರೇಶ ಟಿ. ಹಿರೇಮಠ, ಶಿವಾನಂದ ಆರ್. ಮಾನಕರ, ಜಿ. ಪೂರ್ಣಚಂದ್ರ ಬಾಬುರಾವ್‌, ಟಿ. ನರಸಿಂಗಮೂರ್ತಿ, ಮುಖಂಡರಾದ ಮಳುಗೌಡ ಪಾಟೀಲ, ಗೂಳಪ್ಪ ಶಟಗಾರ, ಮಹಾದೇವ ರಾಠೋಡ, ವಿ.ಸಿ. ನಾಗಠಾಣ, ಸಂಗು ಸಜ್ಜನ ಇದ್ದರು.

ವಿಜಯಪುರ ಜಿಲ್ಲೆಯಲ್ಲಿ ಪೆಂಡಾಲ್ ಮಾಲೀಕರು ಕಾರ್ಮಿಕರ ಜೊತೆ ಆತ್ಮೀಯ ಸಂಬಂಧವಿದೆ. ವ್ಯಾಪಾರಕ್ಕಿಂತ ಹೆಚ್ಚಾಗಿ ಸೇವಾ ಮನೋಭಾವದಿಂದ ಕೆಲಸ ಮಾಡುತ್ತಿರುವುದು ಶ್ಲಾಘನೀಯವಾಗಿದೆ 

–ಎಂ.ಬಿ.ಪಾಟೀಲ ಸಚಿವ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.