ADVERTISEMENT

ವಿಜಯಪುರ: ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಗೆ ಜೈಲು

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2021, 15:18 IST
Last Updated 8 ಏಪ್ರಿಲ್ 2021, 15:18 IST

ವಿಜಯಪುರ:ಮನಗೂಳಿ ಪಟ್ಟಣದಲ್ಲಿ 2019ರ ಡಿಸೆಂಬರ್‌ನಲ್ಲಿವಿದ್ಯಾರ್ಥಿನಿಯನ್ನು ಪ್ರೀತಿಸುವಂತೆ ಪೀಡಿಸಿರುವುದು ಅಲ್ಲದೇ, ಮಾನಸಿಕ ಕಿರುಕುಳ ನೀಡಿ ಹಾಗೂ ಅತ್ಯಾಚಾರಕ್ಕೆ ಪ್ರಯತ್ನಿಸಿದ ಆರೋಪಿಗೆವಿಶೇಷ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶೆ ಸವಿತಾ ಅವರು ಕಠಿಣ ಶಿಕ್ಷೆ ನೀಡಿದ್ದಾರೆ.

ಮನಗೂಳಿಯ ನಿವಾಸಿಯಾದ, ಆರೋಪಿ ಶ್ರೀಶೈಲ ಸೋಮಣ್ಣ ಡೋಣೂರಗೆ 3 ವರ್ಷ ಕಠಿಣ ಶಿಕ್ಷೆ ಹಾಗೂ ₹ 5 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ ಎಂದು ವಿಶೇಷ ಸರ್ಕಾರಿ ಅಭಿಯೋಜಕರಾದ ವಿ.ಜಿ, ಹಗರಗುಂಡ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT