ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಪ್ರೊ.ಬಿ.ಕೆ.ತುಳಸಿಮಾಲಾ ಅವರನ್ನು ನೇಮಕ ಮಾಡಿ ರಾಜ್ಯಪಾಲ ವಜುಬಾಯಿ ವಾಲಾ ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ಮೈಸೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿರುವ ಪ್ರೊ.ತುಳಸಿಮಾಲಾ ಅವರು, ಪ್ರಸ್ತುತ ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾನಿಲಯದ ಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಪ್ರೊ.ತುಳಸಿಮಾಲಾ ಅವರು ಅಧಿಕಾರ ವಹಿಸಿಕೊಂಡ ದಿನದಿಂದ ನಾಲ್ಕು ವರ್ಷಗಳ ವರೆಗೆ ಅಧಿಕಾರಾವಧಿ ಇರುತ್ತದೆ ಎಂದು ರಾಜ್ಯಪಾಲರ ಆದೇಶದಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.