ADVERTISEMENT

ಮಹಿಳಾ ಸಮಸ್ಯೆಗಳಿಗೆ ಪರಿಹಾರ ಭರವಸೆ

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ

​ಪ್ರಜಾವಾಣಿ ವಾರ್ತೆ
Published 15 ಮೇ 2025, 14:38 IST
Last Updated 15 ಮೇ 2025, 14:38 IST
ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಗುರುವಾರ ಆಯೋಜಿಸಿಲಾಗಿದ್ದ ವಿಧವೆಯರ ಕುಂದು ಕೊರತೆ ಸಭೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಮಹಿಳೆಯೊಬ್ಬರ ಸಮಸ್ಯೆ ಆಲಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲಿಕ ಮಾನವರ ಹಾಜರಿದ್ದರು
ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಗುರುವಾರ ಆಯೋಜಿಸಿಲಾಗಿದ್ದ ವಿಧವೆಯರ ಕುಂದು ಕೊರತೆ ಸಭೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಮಹಿಳೆಯೊಬ್ಬರ ಸಮಸ್ಯೆ ಆಲಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲಿಕ ಮಾನವರ ಹಾಜರಿದ್ದರು   

ವಿಜಯಪುರ: ‘ಮಹಿಳೆಯರ ಸಮಸ್ಯೆಗಳಿಗೆ ಪರಿಹಾರ ದೊರಕಿಸಿ ಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು’ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಹೇಳಿದರು. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹಣಮಂತರಾಯ ರಂಗಮಂದಿರದಲ್ಲಿ ಗುರುವಾರ ಆಯೋಜಿಸಿಲಾಗಿದ್ದ ವಿಧವೆಯರ ಕುಂದು ಕೊರತೆ ಸಭೆಯಲ್ಲಿ ಅವರು ಮಾತನಾಡಿದರು.

ಮಹಿಳೆಯರ ಸಮಸ್ಯೆಗಳಿಗೆ ಸಂಬಂಧಿಸಿದ ಸರ್ಕಾರಿ ಇಲಾಖೆಗಳ ಗಮನಕ್ಕೆ ತಂದು, ಸಮಸ್ಯೆ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.

ADVERTISEMENT

ವಿಜಯಪುರದ ಅನ್ನಪೂರ್ಣ ನಾಗನೂರು ಎಂಬುವವರು ಸೂರಿಲ್ಲದೇ ತುಂಬ ತೊಂದರೆಯಾಗುತ್ತಿದ್ದು, ಸರ್ಕಾರಿ ಯೋಜನೆಯಡಿ ಯಾವುದಾದರೊಂದು ಮನೆ ಹಾಗೂ ಉದ್ಯೋಗ ಒದಗಿಸುವಂತೆ ಮನವಿ ಮಾಡಿಕೊಂಡರು. ಆಶ್ರಯ ಯೋಜನೆಯಡಿ ಮನೆ ಹಾಗೂ ಉದ್ಯೋಗ ದೊರಕಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಾಗಲಕ್ಷ್ಮಿ ಚೌಧರಿ ಸೂಚನೆ ನೀಡಿದರು.

ರಬಕವಿ ಬನಹಟ್ಟಿಯಿಂದ ಬಂದಿದ್ದ ರೇಖಾ ತುಂಗಳ ಅವರು, ತನಗೆ ಎರಡು ಮಕ್ಕಳು ಹಾಗೂ ವೃದ್ಧ ತಂದೆ, ತಾಯಿ ಇದ್ದು, ಜೀವನ ನಿರ್ವಹಣೆಗೆ ಆಧಾರ ಕಲ್ಪಿಸಿಕೊಡುವಂತೆ ಕೋರಿದರು. ಮನವಿಗೆ ಸ್ಪಂದಿಸಿದ ಅಧ್ಯಕ್ಷರು, ಪೋಷಕತ್ವ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆಯೂ ಉದ್ಯೋಗ ದೊರಕಿಸಿ ಕೊಡುವುದಾಗಿ ಭರವಸೆ ನೀಡಿದರು.

ವಿಜಯಪುರದ ಸವಿತಾ ಜಮಾದಾರ ಎಂಬುವವರು ಶ್ರವಣ ದೋಷವಿರುವ ತಮ್ಮ ಮಗನ ಚಿಕಿತ್ಸೆಗೆ ಸಹಾಯ, ಚಡಚಣದ ಬಾಲಕಿಯೊಬ್ಬಳು ಮುಂದಿನ ವಿದ್ಯಾಭ್ಯಾಸಕ್ಕೆ ಅಗತ್ಯ ದಾಖಲೆಗಳು ಹಾಗೂ ತನ್ನ ಸಹೋದರಿಗೆ ಹೃದ್ರೋಗದ ಚಿಕಿತ್ಸೆಗೆ ಸಹಾಯ, ಕಲ್ಬುರ್ಗಿಯ ಜಯಶ್ರೀ ಕಲ್ಲೂರ ಅವರ ಮಕ್ಕಳ ಶಿಕ್ಷಣ ಹಾಗೂ ಉದ್ಯೋಗಕ್ಕೆ ಸಹಾಯ, ಬಿ.ಇಡಿ, ಡಿ.ಇಡಿ ಶಿಕ್ಷಣ ಹೊಂದಿರುವ ಸಿಂದಗಿಯ ಗುರುಸಿದ್ದಮ್ಮ ಹೊಸಮನಿಯವರು ಮನವಿ ಸಲ್ಲಿಸಿ, ಪತಿ ನಿಧನವಾಗಿದ್ದು, ಮೂರು ಮಕ್ಕಳಿಗೆ ಕಷ್ಟಸಾಧ್ಯವಾಗುತ್ತಿದೆ. ಕುಟುಂಬ ನಿರ್ವಹಣೆಗೆ ಉದ್ಯೋಗ ದೊರಕಿಸಿಕೊಡುವಂತೆ, ಹಿಟ್ನಳ್ಳಿಯ ಅಂಗವಿಕಲೆ ಚನ್ನಮ್ಮ ಮೇತ್ರಿ ಎಂಬುವವರು ಉದ್ಯೋಗ ದೊರಕಿಸುವಂತೆ ಮನವಿ ಸಲ್ಲಿಸಿದರು.

ಮನವಿಗಳಿಗೆ ಸ್ಪಂದಿಸಿ, ಪರಿಹಾರ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಚೌಧರಿ ಹೇಳಿದರು.

ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿತಿದ್ದ ಮಹಿಳೆಯೊಬ್ಬರು, ತಮ್ಮ ದೂರು ಸಲ್ಲಿಸಿ, ಪತಿಯ ನಿಧನದ ನಂತರ ಜಮೀನು ಮಾರಿದ್ದ ಮಾಲೀಕನು ಇದೀಗ ಜಮೀನಿನಲ್ಲಿ ಉಳುಮೆ ಮಾಡಲು ತಡೆಯೊಡ್ಡುತ್ತಿದ್ದು, ಸಹಾಯ ಒದಗಿಸುವಂತೆ ಕೋರಿದರು. ಮನವಿ ಸ್ವೀಕರಿಸಿದ ನಾಗಲಕ್ಷ್ಮಿ ಅವರು ಸ್ಥಳದಲ್ಲಿದ್ದ ಸಂಬಂಧಿಸಿದ ಅಧಿಕಾರಿಗಳಿಗೆ ಸಮಸ್ಯೆ ಪರಿಹಾರಕ್ಕೆ ಕ್ರಮ ವಹಿಸುವಂತೆ ಸೂಚನೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಸಮಾಜ ಕಲ್ಯಾಣ ಇಲಾಖೆ  ಉಪನಿರ್ದೇಶಕ ಪುಂಡಲಿಕ ಮಾನವರ, ಜಿಲ್ಲಾ ಶಸ್ತ್ರಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಸಿ.ಬಿ.ಕುಂಬಾರ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ರಾಠೋಡ, ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು ಇದ್ದರು.

Highlights - ಮಹಿಳೆಯರ ಸಮಸ್ಯೆ ಆಲಿಸಿದ ಅಧ್ಯಕ್ಷೆ ಚೌಧರಿ ಉದ್ಯೋಗ ದೊರಕಿಸಿ ಕೊಡುವ ಭರವಸೆ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಸೂಚನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.