ವಿಜಯಪುರ:ಕುಡಿಯುವ ನೀರಿನ ಸಮಸ್ಯೆ ಬಿಗಡಾಯಿಸಿದೆ ಎಂದು ದೂರಿ ವಿಜಯಪುರದ ಆದರ್ಶ ನಗರ ನಿವಾಸಿಗಳು ಶನಿವಾರ ದಿಢೀರ್ ರಸ್ತೆ ತಡೆ ನಡೆಸಿ, ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಖಾಲಿ ಕೊಡಗಳೊಂದಿಗೆ ರಸ್ತೆಗೆ ಅಡ್ಡಲಾಗಿ ಕುಳಿತು, ವಾಹನ ಸಂಚಾರಕ್ಕೆ ಅಡ್ಡಿಯುಂಟು ಮಾಡಿದರು. ಮಹಾನಗರ ಪಾಲಿಕೆ ಆಡಳಿತ, ಜಲಮಂಡಳಿ ಅಧಿಕಾರಿಗಳ ವಿರುದ್ಧ ಇದೇ ಸಂದರ್ಭ ಹರಿಹಾಯ್ದರು.
ಪ್ರತಿಭಟನೆಯ ವಿಷಯ ತಿಳಿದು ಸ್ಥಳಕ್ಕೆ ಬಂದ ಜಲಮಂಡಳಿ ಅಧಿಕಾರಿಗಳಿಂದ ಲಿಖಿತ ಭರವಸೆ ಪಡೆದ ಬಳಿಕವೇ ಆದರ್ಶ ನಗರ ನಿವಾಸಿಗಳು ಪ್ರತಿಭಟನೆ ವಾಪಸ್ ಪಡೆದಿದ್ದು ವಿಶೇಷವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.