ADVERTISEMENT

ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಶಿಕ್ಷಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2019, 16:01 IST
Last Updated 10 ಡಿಸೆಂಬರ್ 2019, 16:01 IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಅನುದಾನ ರಹಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ಸದಸ್ಯರು ವಿಜಯಪುರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದರು
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಅನುದಾನ ರಹಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ಸದಸ್ಯರು ವಿಜಯಪುರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದರು   

ವಿಜಯಪುರ: ಅನುದಾನ ರಹಿತ ಶಾಲಾ ಶಿಕ್ಷಕರ ಕಾಲ್ಪನಿಕ ವೇತನ ಏರಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಅನುದಾನ ರಹಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ಸದಸ್ಯರು ಜಿಲ್ಲೆಯ ಎಲ್ಲಾ ಖಾಸಗಿ ಶಾಲೆಗಳನ್ನು ಬಂದ್‌ ಮಾಡಿ ನಗರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಮೆರವಣಿಗೆ ಹೊರಟು ಗಾಂಧಿ ಚೌಕ್, ಬಸವೇಶ್ವರ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಸಾವಿರಾರು ಸಂಖ್ಯೆಯಲ್ಲಿ ಶಿಕ್ಷಕರು, ಶಿಕ್ಷಕಿಯರು ಪಾಲ್ಗೊಂಡಿದ್ದರು.

‘1995ರ ನಂತರದ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಅನುದಾನಕ್ಕೆ ಒಳಪಡಿಸಬೇಕು. ಅನುದಾನಿತ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ ಕಾಲ್ಪನಿಕ ವೇತನವನ್ನು ಹೆಚ್ಚಿಸಬೇಕು. ಬಡ್ತಿ ನಿಯಮ ಜಾರಿಗೊಳಿಸಬೇಕು. ಖಾಸಗಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೂ ಬಿಸಿಯೂಟ, ಹಾಲು, ಸಮವಸ್ತ್ರ, ಪಠ್ಯ ಪುಸ್ತಕ, ಸೈಕಲ್ ವಿತರಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಒಕ್ಕೂಟದ ಗೌರವ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಜಿಲ್ಲಾ ಕಾರ್ಯಾಧ್ಯಕ್ಷ ಸಂಗನಗೌಡ ಯಂಕಂಚಿ, ಜಿಲ್ಲಾ ಉಪಾಧ್ಯಕ್ಷ ಎಂ.ಆರ್.ತುಪ್ಪದ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲೇಶಿ ಪವಾರ, ಸಹ ಕಾರ್ಯದರ್ಶಿ ಲಕ್ಷ್ಮಿಕಾಂತ ಮಾನೆ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.