ADVERTISEMENT

ಸಾರ್ವಜನಿಕ ಪ್ರಾರ್ಥನೆ ನಿಷೇಧ: ಡಿಸಿ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2021, 6:52 IST
Last Updated 22 ಏಪ್ರಿಲ್ 2021, 6:52 IST

ವಿಜಯಪುರ: ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ, ರಾಜ್ಯ ಸರ್ಕಾರ ಹೊರಡಿಸಿರುವ ಹೊಸ ಮಾರ್ಗ ಸೂಚಿಯನ್ವಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಧರ್ಮಗಳ ಪ್ರಾರ್ಥನಾ ಮಂದಿರ ಮತ್ತು ಧಾರ್ಮಿಕ ಕೇಂದ್ರಗಳಲ್ಲಿ ಸಾರ್ವಜನಿಕ ಪ್ರಾರ್ಥನೆ ಹಾಗೂ ಪೂಜೆ ಸಲ್ಲಿಸುವಿಕೆ ನಿಷೇಧಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.

ಧಾರ್ಮಿಕ ಕೇಂದ್ರಗಳಲ್ಲಿ ಪೂಜೆ, ಪುರಸ್ಕಾರಗಳನ್ನು ಸಲ್ಲಿಸುವ ಸಿಬ್ಬಂದಿಗೆ ಮಾತ್ರ ಪೂಜಾ ಕಾರ್ಯಗಳನ್ನು ನಿರ್ವಹಿಸಲು ಅವಕಾಶ ನೀಡಲಾಗಿದ್ದು, ಯಾವುದೇ ವಿಶೇಷ ಪೂಜೆಗಳಿಗೆ ಅವಕಾಶವಿರುವುದಿಲ್ಲ.

ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಜಿಲ್ಲೆಯ ಸಾರ್ವಜನಿಕರು ಸಹಕಾರ ನೀಡುವುದು ಅಗತ್ಯವಾಗಿದ್ದು, ಧಾರ್ಮಿಕ ಆಚರಣೆ, ಪ್ರಾರ್ಥನೆಗಳು ಜನಜಂಗುಳಿಯಿಂದ ಕೂಡಿರದೆ, ತಮ್ಮ ಮನೆಗಳಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.