ADVERTISEMENT

ರಸಪ್ರಶ್ನೆ: ತಮದಡ್ಡಿ ಸರ್ಕಾರಿಶಾಲೆಗೆ ಪ್ರಥಮ ಬಹುಮಾನ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2019, 14:46 IST
Last Updated 13 ಡಿಸೆಂಬರ್ 2019, 14:46 IST
ವಿಜಯಪುರದಲ್ಲಿ ಶುಕ್ರವಾರ ಜರುಗಿದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು
ವಿಜಯಪುರದಲ್ಲಿ ಶುಕ್ರವಾರ ಜರುಗಿದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು   

ವಿಜಯಪುರ: ಅಗಸ್ತ್ಯ ಅಂತರರಾಷ್ಟ್ರೀಯ ಪ್ರತಿಷ್ಠಾನ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಶುಕ್ರವಾರ ಜರುಗಿದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ತಾಳಿಕೋಟೆ ತಾಲ್ಲೂಕು ತಮದಡ್ಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಹಾಗೂ ₹ 6 ಸಾವಿರ ಬಹುಮಾನ ಪಡೆದುಕೊಂಡರು.

ವಿಜಯಪುರ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದ್ವಿತೀಯ ಸ್ಥಾನ ಹಾಗೂ ₹ 4 ಸಾವಿರ, ಅರಕೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ತೃತೀಯ ಸ್ಥಾನ ಹಾಗೂ ₹ 2 ಸಾವಿರ ಬಹುಮಾನ ಪಡೆದರು.

ಜಿಲ್ಲೆಯ 50 ಸರ್ಕಾರಿ ಶಾಲೆಗಳ 200 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. 8 ಶಾಲೆಗಳ 16 ವಿದ್ಯಾರ್ಥಿಗಳನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗಿತ್ತು.

ADVERTISEMENT

ಸರ್ವ ಶಿಕ್ಷಣ ಅಭಿಯಾನದ ಸಹಾಯಕ ಯೋಜನಾ ಸಮನ್ವಯ ಅಧಿಕಾರಿ ಆರ್.ಬಿ.ಪಾಟೀಲ, ಬೇಟಿ ಬಚಾವೋ ಬೇಟಿ ಫಡಾವೋ ಜಿಲ್ಲಾ ನೋಡಲ್ ಅಧಿಕಾರಿ ನಿರ್ಮಲಾ ದೊಡ್ಡಮನಿ ಬಹುಮಾನ ವಿತರಿಸಿದರು. ಬಸವರಾಜ ರಾಮದುರ್ಗ ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು.

ಶಾಸಕ ಅರುಣ ಶಹಾಪುರ ಉದ್ಘಾಟಿಸಿದರು. ಅಗಸ್ತ್ಯ ಅಂತರರಾಷ್ಟ್ರೀಯ ತರಬೇತಿ ಕೇಂದ್ರದ ಮುಖ್ಯಸ್ಥ ಸತೀಶ ಗೋಡಕಿಂಡಿ, ಪ್ರಾದೇಶಿಕ ಮುಖ್ಯಸ್ಥೆ ಗೀತಾ ಪಾಟೀಲ, ವಿಜ್ಞಾನ ಕೇಂದ್ರದ ಮುಖ್ಯಸ್ಥೆ ಸುಮಾ ಚೌಧರಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.