ADVERTISEMENT

ವಿಜಯಪುರ: ರೇಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 11 ಮೇ 2025, 16:26 IST
Last Updated 11 ಮೇ 2025, 16:26 IST
ಹೊನಗನಹಳ್ಳಿ ಬಳಿಯ ವಿಜಯಪುರ-ಬಾಗಲಕೋಟೆ ರಾಷ್ಟ್ರೀಯ ಹೆದ್ದಾರಿಯ ರೇಲ್ವೆ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಸಂಸದ ರಮೇಶ ಜಿಗಜಿಣಗಿ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು 
ಹೊನಗನಹಳ್ಳಿ ಬಳಿಯ ವಿಜಯಪುರ-ಬಾಗಲಕೋಟೆ ರಾಷ್ಟ್ರೀಯ ಹೆದ್ದಾರಿಯ ರೇಲ್ವೆ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಸಂಸದ ರಮೇಶ ಜಿಗಜಿಣಗಿ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು    

ವಿಜಯಪುರ: ನಗರದ ಹೊರವಲಯದ ಹೊನಗನಹಳ್ಳಿ ಬಳಿಯ ವಿಜಯಪುರ-ಬಾಗಲಕೋಟೆ ರಾಷ್ಟ್ರೀಯ ಹೆದ್ದಾರಿಯ ರೇಲ್ವೆ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಸಂಸದ ರಮೇಶ ಜಿಗಜಿಣಗಿ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ರಸ್ತೆಯಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಮಾಡುವಂತೆ ಬಹುದಿನಗಳಿಂದ ಸಾರ್ವಜನಿಕರ ಒತ್ತಾಯವಿತ್ತು. ಇದಕ್ಕೆ ಪ್ರಧಾನಿ ಮೋದಿ, ಕೇಂದ್ರ ಸಚಿವ ನಿತನ್ ಗಡ್ಕರಿ ಅವರನ್ನು ಭೇಟಿಯಾಗಿ ಮನವಿ ಮಾಡಿಕೊಂಡ ಹಿನ್ನೆಲೆ, ಕೇಂದ್ರ ಸರ್ಕಾರದ ₹70 ಕೋಟಿ ಅನುದಾನದಲ್ಲಿ ಒಂದೂವರೆ ಕಿಮೀ ರೇಲ್ವೆ ಮೇಲ್ಸೇತುವೆ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಅತೀ ಶೀಘ್ರದಲ್ಲಿ ಲೋಕಾಪರ್ಣೆಗೊಂಡು, ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಸಂಸದ ರಮೇಶ ಜಿಗಜಿಣಗಿ ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿಯ ಕಾರ್ಯಪಾಲಕ ಎಂಜಿನಿಯರ್‌ ವಿಜಯ ಪಾಟೀಲ, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ವಿವೇಕ ಮಠ, ಬಿಜೆಪಿ ಮಾಧ್ಯಮ ಪ್ರಮುಖ ವಿಜಯ ಜೋಶಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.