ADVERTISEMENT

ರೈಲು ನಿಲ್ದಾಣ: ಪ್ಲಾಟ್‌ಫಾರ್ಮ್ ಟಿಕೆಟ್ ದರ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2022, 12:20 IST
Last Updated 18 ಅಕ್ಟೋಬರ್ 2022, 12:20 IST

ವಿಜಯಪುರ: ನೈರುತ್ಯ ರೈಲ್ವೆಯು ರೈಲು ನಿಲ್ದಾಣಗಳಲ್ಲಿ ದೀಪಾವಳಿ ಹಬ್ಬ ಮತ್ತು ರಜಾ ದಿನಗಳಲ್ಲಿ ಜನದಟ್ಟಣೆಯನ್ನು ತಪ್ಪಿಸಲು ಮತ್ತು ಪ್ರಯಾಣಿಕರಿಗೆ ಪ್ಲಾಟ್ ಫಾರ್ಮ್‌ ಗಳಲ್ಲಿ ಓಡಾಟಕ್ಕೆ ಮುಕ್ತ ಅವಕಾಶ ಮಾಡಿಕೊಡಲು ಪ್ಲಾಟ್‌ಫಾರ್ಮ್ ಟಿಕೆಟ್ ದರವನ್ನು ತಾತ್ಕಾಲಿಕವಾಗಿ ಹೆಚ್ಚಿಸಿದೆ.

ಹುಬ್ಬಳ್ಳಿ ವಿಭಾಗದ ಹುಬ್ಬಳ್ಳಿ, ಬೆಳಗಾವಿ, ಬಳ್ಳಾರಿ, ಹೊಸಪೇಟೆ ಮತ್ತು ವಿಜಯಪುರ ರೈಲು ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್ ಟಿಕೆಟ್ ದರವನ್ನು ಅಕ್ಟೋಬರ್‌ 21 ರಿಂದ 31 ರ ವರೆಗೆ ₹10 ರಿಂದ ₹20 ಕ್ಕೆ ತಾತ್ಕಾಲಿಕವಾಗಿ ಹೆಚ್ಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT