ADVERTISEMENT

ವಿಜಯಪುರ | ತಿಕೋಟಾ, ನಾಲತವಾಡದಲ್ಲಿ ತಂಪೆರೆದ ಮಳೆ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2020, 10:16 IST
Last Updated 5 ಏಪ್ರಿಲ್ 2020, 10:16 IST
   

ವಿಜಯಪುರ: ಜಿಲ್ಲೆಯ ತಿಕೋಟಾ, ನಾಲತವಾಡ ಪಟ್ಟಣದಲ್ಲಿ ಭಾನುವಾರ ಮಧ್ಯಾಹ್ನ ಅರ್ಧ ತಾಸಿಗೂ ಅಧಿಕ ಹೊತ್ತು ಮಳೆ ಸುರಿಯಿತು. ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ ಇದ್ದು, ಗುಡುಗು, ಸಿಡಿಲು ಆರಂಭವಾಗಿದೆ.

ತಿಕೋಟಾ ವ್ಯಾಪ್ತಿಯಲ್ಲಿ ಕೊಯ್ಲಿಗೆ ಬಂದಿರುವ ದ್ರಾಕ್ಷಿ ಬೆಳೆಗೆ ಮಳೆಯಿಂದ ಸಮಸ್ಯೆಯಾಗಿದ್ದು, ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದಾರೆ.

ಈ ಸಮಯದಲ್ಲಿ ದ್ರಾಕ್ಷಿ ಕಟಾವು ಮಾಡಿಒಣದ್ರಾಕ್ಷಿ ಸಿದ್ದಪಡುಸುವ ಕಾರ್ಯ ಭರದಿಂದ ನಡೆದಿದ್ದು, ಮಳೆಯಿಂದ ಆ ಒಣದ್ರಾಕ್ಷಿ ತೊಯ್ದರೇ ಅದು ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಇದರಿಂದಾಗಿ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆಯಾಗಿ ರೈತನಿಗೆ ನಷ್ಟವಾಗು ಸಾಧ್ಯತೆ ಇದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.