
ಸಿಂದಗಿ: ಭಾರತ ಜೋಡೊ ನ್ಯಾಯ ಯಾತ್ರೆಯ ನೇತೃತ್ವ ವಹಿಸಿರುವ ಸಂಸದ ರಾಹುಲ್ ಗಾಂಧಿ ಅವರ ಮೇಲೆ ಆಸ್ಸಾಂನಲ್ಲಿ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಇಲ್ಲಿಯ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಾಲಯದ ಎದುರು ಮಂಗಳವಾರ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಶಾಸಕ ಅಶೋಕ ಮನಗೂಳಿ ಮಾತನಾಡಿ, ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿಯವರ ಮೇಲೆ ಹಲ್ಲೆ ನಡೆಸಿದ್ದಲ್ಲದೇ ಹಿಂದೂ ದೇವಸ್ಥಾನದೊಳಗೆ ಪ್ರವೇಶ ನಿರ್ಭಂಧಿಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಯೋಧ್ಯೆಯ ರಾಮನನ್ನು ಬಿಜೆಪಿಯವರು ಖರೀದಿಸಿರುವಂತೆ ವರ್ತಿಸುತ್ತಿದ್ದಾರೆ. ಧರ್ಮ-ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ ಚುನಾವಣೆಯಲ್ಲಿ ಗೆಲ್ಲುವ ಕುತಂತ್ರ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುರೇಶ ಪೂಜಾರಿ ಮಾತನಾಡಿದರು.
ರಜತ ತಾಂಬೆ, ಅಂಬಿಕಾ ಪಾಟೀಲ, ಸುರೇಶ ಮಳಲಿ, ಜ್ಯೋತಿ ಗುಡಿಮನಿ, ರಾಮೂ ಮನ್ಸೂರ, ಮಹಮ್ಮದಪಟೇಲ, ಖಲೀಲ ದಾದಾಪೀರ, ಸಂತೋಷ ಬಿರಾದಾರ, ಸುರೇಶ ಚೌಧರಿ, ಯಂಕನಗೌಡ, ಜಯಶ್ರೀ ಹದನೂರ, ಶಾರದಾ ಬೆಟಗೇರಿ, ಅಶ್ವಿನಿ, ವರ್ಷಾ ಪಾಟೀಲ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.