ADVERTISEMENT

ತೈಲ ದರ ಇಳಿಕೆಗೆ ಶೀಘ್ರ ಕ್ರಮ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ತೊರವಿ ಲಕ್ಷ್ಮಿ ನರಸಿಂಹ ದರ್ಶನ ಪಡೆದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2021, 16:48 IST
Last Updated 1 ಮಾರ್ಚ್ 2021, 16:48 IST

ವಿಜಯಪುರ: ತೈಲ ದರ ಇಳಿಕೆಗೆ ಕೆಲವೇ ದಿನಗಳಲ್ಲಿ ಕ್ರಮಕೈಗೊಳ್ಳಲಾಗುವುದು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಟ್ಟಿಗೆ ಸೇರಿ ತೆರಿಗೆ ಕಡಿಮೆ ಮಾಡುವ ಬಗ್ಗೆ ಚಿಂತನೆ ನಡೆದಿದೆ ಎಂದುಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಇಲ್ಲಿನ ತೊರವಿ ಲಕ್ಷ್ಮಿ ನರಸಿಂಹ ದೇವಸ್ಥಾನದಲ್ಲಿ ಕುಟುಂಬ ಪರಿವಾರ ಸಮೇತ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಪೆಟ್ರೋಲ್‌, ಡೀಸೆಲ್‌ ಅನ್ನು ಜಿಎಸ್‌ಟಿ ಗೆ ಸೇರಿಸಲು ಕೇಂದ್ರ ಸರ್ಕಾರ ಸಿದ್ದವಿದೆ. ಆದರೆ, ರಾಜ್ಯ ಸರ್ಕಾರಗಳು ಇದಕ್ಕೆ ಒಪ್ಪುತ್ತಿಲ್ಲ ಎಂದರು.

ADVERTISEMENT

ಬಹಳ ಕಡೆ ನೈಸರ್ಗಿಕ ಅನಿಲ ಕೊಡುವ ಪ್ರಯತ್ನ ಮಾಡುತ್ತಿದ್ದೇವೆ. ನಗರ ಪ್ರದೇಶಗಳಲ್ಲಿ ನೈಸರ್ಗಿಕ ಅನಿಲ ಉಳಿದ ಕಡೆಗಳಿಗಿಂತ ಕಡಿಮೆ ಇರುತ್ತದೆ. ಆ ದಿಕ್ಕಿನತ್ತ ನಮ್ಮ ಪ್ರಯತ್ನ ನಡೆದಿದೆ.ಇಷ್ಟರಲ್ಲೆ ತೈಲ ಉತ್ಪಾದಕರ ಮೇಲೆ ಒತ್ತಡ ಹಾಕುತ್ತೇವೆ. ತೈಲ ಉತ್ಪಾದನೆ ಜಾಸ್ತಿ ಮಾಡಿಸುತ್ತೇವೆ ಎಂದರು.

ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ವಿಜಯೇಂದ್ರ ಮೇಲಿನ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು,ಯಡಿಯೂರಪ್ಪ ಅನುಭವಿ ನಾಯಕರು. ಅವರ ನೇತೃತ್ವದಲ್ಲಿ ಆಡಳಿತ ಸುಗಮವಾಗಿ ಸಾಗುವಾಗ ಬೇರೆ ವಿಚಾರಗಳಿಗೆ ಕಿವಿಗೊಡುವ ಅವಶ್ಯಕತೆ ಇಲ್ಲ ಎಂದು ಹೇಳಿದರು.

ಇನ್ನು ದೇವರ ದರ್ಶನಕ್ಕೆ ಸಂಬಂಧಿಸಿದಂತೆ ಮಾತನಾಡುತ್ತಾ, ಚುನಾವಣೆ ಬಳಿಕ ದೇವರ ದರ್ಶನಕ್ಕೆ ಬರಲಾಗಿರಲಿಲ್ಲ.2019 ಚುನಾವಣೆ ನಂತರ ದೇವರ ದರ್ಶನಕ್ಕೆ ಬಂದಿರಲಿಲ್ಲ. ಅದಕ್ಕೆ ಈಗ ಕುಟುಂಬ ಸಮೇತ ದೇವರ ದರ್ಶನಕ್ಕೆ ಬಂದಿದ್ದೇನೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.