ADVERTISEMENT

ಮನುಕುಲದ ಏಳಿಗೆ ಬಯಸಿದ ರೇಣುಕಾಚಾರ್ಯ: ಆರ್.ಬಿ. ದಮ್ಮೂರಮಠ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2026, 2:26 IST
Last Updated 2 ಮಾರ್ಚ್ 2026, 2:26 IST
ತಾಳಿಕೋಟೆ  ಪಟ್ಟಣದ ಎಪಿಎಂಸಿ ವರ್ತಕರ ಸಭಾಭವನದಲ್ಲಿ ಜಂಗಮ ಸಮಾಜದಿಂದ  ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಕಳೆದ ಬಾರಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ತಾಳಿಕೋಟೆ  ಪಟ್ಟಣದ ಎಪಿಎಂಸಿ ವರ್ತಕರ ಸಭಾಭವನದಲ್ಲಿ ಜಂಗಮ ಸಮಾಜದಿಂದ  ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಕಳೆದ ಬಾರಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.   

ತಾಳಿಕೋಟೆ: ‘ರೇಣುಕಾಚಾರ್ಯರು ಇಡೀ ಮನುಕುಲದ ಏಳಿಗೆ ಬಯಸಿದವರು. ಅವರ ಅನುಯಾಯಿಗಳಾದ ನಾವು ಕೇವಲ ಅವರ ಜಯಂತಿ ಆಚರಿಸಿದರೆ ಸಾಲದು ಅವರ ಬದುಕಿನ ಆದರ್ಶಗಳನ್ನು ಅನುಸರಿಸಬೇಕು’ ಎಂದು ಮುದ್ದೇಬಿಹಾಳ ಕ್ಷೇತ್ರ ಸಮನ್ವಯಾಧಿಕಾರಿ ಆರ್.ಬಿ. ದಮ್ಮೂರಮಠ ಹೇಳಿದರು.

ಪಟ್ಟಣದ ಎಪಿಎಂಸಿ ವರ್ತಕರ ಸಭಾಭವನದಲ್ಲಿ ಜಂಗಮ ಸಮಾಜದಿಂದ ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಧರ್ಮಸಭೆಯಲ್ಲಿ ಭಾನುವಾರ ಅವರು ಮಾತನಾಡಿದರು.

‘ಇವತ್ತು ರಾಜ್ಯದಲ್ಲಿ ಶೇ 2ರಷ್ಟು ಜನಸಂಖ್ಯೆ ಹೊಂದಿರುವ ಜಂಗಮ ಸಮಾಜ ಆರ್ಥಿಕ ಸಾಮಾಜಿಕ ರಾಜಕೀಯ ಹಾಗೂ ಶೈಕ್ಷಣಿಕವಾಗಿ ಅತಿ ಹಿಂದುಳಿದರುವ ಸಮಾಜವಾಗಿದೆ ಎಂದು ವರದಿಗಳು ಹೇಳುತ್ತವೆ. ಇದರ ಕುರಿತು ನಾವೆಲ್ಲರೂ ಚಿಂತಿಸಿ ಎಚ್ಚೆತ್ತುಕೊಳ್ಳುವ ಅಗತ್ಯವಿದೆ’ ಎಂದರು.

ADVERTISEMENT

ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಆರ್.ಎಸ್. ಪಾಟೀಲ(ಕೂಚಬಾಳ) ಮಾತನಾಡಿದರು. ಕೊಡೆಕಲ್ಲ ದುರುದುಂಡೇಶ್ವರ ವಿರಕ್ತಮಠದ ಶಿವಕುಮಾರ ಸ್ವಾಮೀಜಿ, ಕಲ್ಕೇರಿ ಮಡಿವಾಳೇಶ್ವರ ಶ್ರೀ ಹಾಗೂ ಎಸ್.ಎಸ್. ವಿದ್ಯಾ ಸಂಸ್ಥೆಯ ಅಧ್ಯಕ್ಷ ಎಚ್ಎಸ್ ಪಾಟೀಲ ಸಾನ್ನಿಧ್ಯ ವಹಿಸಿದ್ದರು.

ನಾವದಗಿ ಬೃಹನ್ಮಠದ ರಾಜ ಗುರು ರಾಜೇಂದ್ರ ಒಡೆಯರ ಶಿವಾಚಾರ್ಯರು, ಸಮಾರಂಭವನ್ನು ಉದ್ಘಾಟಿಸಿದರು.

ಚಬನೂರ ರಾಮಲಿಂಗೇಶ್ವರ ಮಠದ ರಾಮಲಿಂಗಯ್ಯಶ್ರೀ ಸಾಸನೂರ– ತುಂಬಗಿ ಹಿರೇಮಠದ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಕಲಕೇರಿಯ ಸಿದ್ದರಾಮ ಶಿವಾಚಾರ್ಯರು, ಬಲಶೆಟ್ಟಿಹಾಳದ ಸಿದ್ದಲಿಂಗ ದೇವರು, ಲೋಟಗೇರಿಯ ಗುರುಮೂರ್ತಿ ದೇವರು, ಮುರಗೇಶ ವಿರಕ್ತಮಠ, ಕಾಶಿಬಾಯಿ ಅಮ್ಮನವರು ಸಾನ್ನಿಧ್ಯ ವಹಿಸಿದ್ದರು.

ಪುರಸಭೆ ಮಾಜಿ ಸದಸ್ಯ ಪ್ರಭುಗೌಡ ಮದರಕಲ್ಲ, ಶ್ರೀಗುರು ಹಿರೇಮಠ, ಪಂಚಾಚಾರ್ಯ ಸಹಕಾರಿ ಸಂಘದ ಅಧ್ಯಕ್ಷ ಮುತ್ತು ಜಹಗೀರದಾರ, ಸಮಾಜದ ಅಧ್ಯಕ್ಷ ಶರಣಯ್ಯ ಹಿರೇಮಠ, ಉಪಾಧ್ಯಕ್ಷ ಶಿವಲಿಂಗಯ್ಯ ಹಿರೇಮಠ, ಕಾರ್ಯದರ್ಶಿ ಈರಯ್ಯ ಹಿರೇಮಠ, ಗಜದಂಡಯ್ಯ ಹಿರೇಮಠ, ಸಮಾಜದ ಗಣ್ಯರು ಹಿರಿಯರು ಹಾಗೂ ಮಹಿಳೆಯರು ಇದ್ದರು.

ಕಳೆದ ಬಾರಿ ಎಸ್ಎಸ್ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಸುವರ್ಣಾ ಗದುಗಿನಮಠ, ಸೋಮಶೇಖರಯ್ಯ ಹಿರೇಮಠ ಹಾಗೂ ರಾಜಶೇಖರ ಹಿರೇಮಠ ನಿರ್ವಹಿಸಿದರು.

ತಾಳಿಕೋಟೆ  ಪಟ್ಟಣದ ಎಪಿಎಂಸಿ ವರ್ತಕರ ಸಭಾಭವನದಲ್ಲಿ ಜಂಗಮ ಸಮಾಜದಿಂದ  ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮವನ್ನು   ನಾವದಗಿಶ್ರೀ ಭಾನುವಾರ ಉದ್ಘಾಟಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.