ADVERTISEMENT

ಸಂಪುಟದಲ್ಲಿ ಪ್ರಾದೇಶಿಕ ಅಸಮಾನತೆ; ಯತ್ನಾಳ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2020, 15:37 IST
Last Updated 10 ಫೆಬ್ರುವರಿ 2020, 15:37 IST

ವಿಜಯಪುರ: ‘ಸಚಿವ ಸಂಪುಟ ಎಂದರೆ ಕೇವಲ ಬೆಳಗಾವಿ, ಬೆಂಗಳೂರು ಎಂಬಂತಾಗಿದೆ. ಈ ಪ್ರಾದೇಶಿಕ ಅಸಮಾನತೆ ತೊಡೆದುಹಾಕಲು ಕೂಡಲೇ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಮುಖ್ಯಮಂತ್ರಿಗೆ ಪತ್ರ ಬರೆದಿದ್ದೇನೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೋಮವಾರ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇತರ ಜಿಲ್ಲೆಗಳ ಶಾಸಕರ ಆಕಾಂಕ್ಷಿಗಳಿಗೂ ಮುಖ್ಯಮಂತ್ರಿ ಸ್ಪಂದಿಸಬೇಕು. ಮಹೇಶ ಕುಮಠಳ್ಳಿ ಅವರಿಗೆ ಏಕೆ ಸಚಿವ ಸ್ಥಾನ ನೀಡಿಲ್ಲ ಎಂಬುದು ಗೊತ್ತಾಗಬೇಕು. ಪ್ರಾದೇಶಿಕ ಅಸಮಾನತೆ, ಬಜೆಟ್‌ನಲ್ಲಿ ಹಣ ಮೀಸಲು ಇಡುವ ಬಗ್ಗೆ ಶಾಸಕರೊಂದಿಗೆ ಚರ್ಚಿಸಬೇಕು’ ಎಂದು ಆಗ್ರಹಿಸಿದರು.

‘ಸಂಪುಟ ವಿಸ್ತರಣೆಯಿಂದ ಬಿಜೆಪಿ ಮೂಲ ಶಾಸಕರಲ್ಲಿ ಅಸಮಾಧಾನ ಉಂಟಾಗಿದೆ. ಇದನ್ನು ಹೋಗಲಾಡಿಸಲು ಸಭೆ ಕರೆಯಬೇಕು’ ಎಂದು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.