ಜೈಲು
(ಪ್ರಾಧಿನಿಧಿಕ ಚಿತ್ರ)
ವಿಜಯಪುರ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 10ನೇ ಆರೋಪಿ ವಿನಯನನ್ನು ಶನಿವಾರ ಮಧ್ಯಾಹ್ನ 2ಕ್ಕೆ ವಿಜಯಪುರ ಕೇಂದ್ರ ಕಾರಾಗೃಹಕ್ಕೆ (ದರ್ಗಾ ಜೈಲು) ಸ್ಥಳಾಂತರಿಸಲಾಯಿತು.
ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಿಂದ ಸಿಎಆರ್ ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಕರೆತರಲಾಯಿತು. ಜೈಲಿಗೆ ಬಂದ ಬಳಿಕ ವಿನಯ್ ಆರೋಗ್ಯ ತಪಾಸಣೆ ಹಾಗೂ ಇತರ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಕೇಂದ್ರ ಕಾರಾಗೃಹದ ಒಳಗೆ ಕಾರಾಗೃಹ ಸಿಬ್ಬಂದಿ ಕರೆದೊಯ್ದರು.
‘ಕಾರಾಗೃಹದ ಸೆಲ್ ನಂಬರ್ 1 ರಲ್ಲಿ ಆರೋಪಿ ವಿನಯನನ್ನು ಇರಿಸಲಾಗಿದೆ. 14433 ವಿಚಾರಣಾಧೀನ ಕೈದಿ ಸಂಖ್ಯೆ ನೀಡಲಾಗಿದೆ. ಸೆಲ್‌ನಲ್ಲಿ ಶೌಚಾಲಯ ಸೌಲಭ್ಯ ಇದೆ. ಸಿಸಿಟಿವಿ ಕಣ್ಗಾವಲು ಇದೆ. ಜೊತೆಗೆ ಇಬ್ಬರು ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ವಾರದಲ್ಲಿ ಒಂದು ಬಾರಿ ಮಾತ್ರ ಕುಟುಂಬಸ್ಥರಿಗೆ ಹಾಗೂ ಅವರ ಪರ ವಕೀಲರಿಗೆ ಭೇಟಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು’ ಎಂದು ಜೈಲು ಅಧೀಕ್ಷಕ ಐ.ಜೆ.ಮ್ಯಾಗೇರಿ ‘ಪ್ರಜಾವಾಣಿ’ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.