ADVERTISEMENT

ಮಳೆಯಿಂದ ಹದಗೆಟ್ಟ ರಸ್ತೆ ದುರಸ್ತಿಗೊಳಿಸಿ

ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸುಜಾತಾ ಸೋಮನಾಥ ಕಳ್ಳಿಮನಿ ಸೂಚನೆ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2020, 14:16 IST
Last Updated 11 ನವೆಂಬರ್ 2020, 14:16 IST
ವಿಜಯಪುರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸುಜಾತಾ ಸೋಮನಾಳ ಕಳ್ಳಿಮನಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಿಇಒ ಗೋವಿಂದ ರೆಡ್ಡಿ, ಉಪಾಧ್ಯಕ್ಷ ಪ್ರಭುಲಿಂಗ ದೇಸಾಯಿ ಇದ್ದಾರೆ
ವಿಜಯಪುರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸುಜಾತಾ ಸೋಮನಾಳ ಕಳ್ಳಿಮನಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಿಇಒ ಗೋವಿಂದ ರೆಡ್ಡಿ, ಉಪಾಧ್ಯಕ್ಷ ಪ್ರಭುಲಿಂಗ ದೇಸಾಯಿ ಇದ್ದಾರೆ   

ವಿಜಯಪುರ: ಮಳೆ ಮತ್ತು ಪ್ರವಾಹದಿಂದ ಜಿಲ್ಲೆಯಲ್ಲಿ ಹಾನಿಗೊಳಗಾದ ರಸ್ತೆಗಳ ದುರಸ್ತಿ ಕಾರ್ಯಕೈಗೊಳ್ಳುವಂತೆಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸುಜಾತಾ ಸೋಮನಾಥ ಕಳ್ಳಿಮನಿ ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ‌

ಹದಗೆಟ್ಟಿರುವ ರಸ್ತೆಗಳಲ್ಲಿ ಸಾರ್ವಜನಿಕರ ಹಾಗೂ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿದೆ. ಅಪಘಾತಗಳು ಸಂಭವಿಸಿ ಪ್ರಾಣಹಾನಿಯಾಗುತ್ತಿವೆ. ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದರು.

ADVERTISEMENT

ರೈತರಿಗೆ ಪ್ರೋತ್ಸಾಹಕರ ಕಾರ್ಯಕ್ರಮಗಳನ್ನು ರೂಪಿಸಿ, ಅನುಷ್ಠಾನಗೊಳಿಸಬೇಕು ಹಾಗೂಜಾನುವಾರುಗಳಿಗೆ ಕಾಲುಬಾಯಿ ರೋಗ ನಿಯಂತ್ರಿಸುವ ನಿಟ್ಟಿನಲ್ಲಿ ಲಸಿಕಾ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಯಾವುದೇ ದೂರುಗಳು ಬಾರದಂತೆ ನೋಡಿಕೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.

ನೆರೆ ಹಿನ್ನೆಲೆ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಇದಕ್ಕಾಗಿ ಕೆರೆಗಳಿಂದ ನೀರು ಒದಗಿಸಿ ಶಾಶ್ವತ ಪರಿಹಾರ ಒದಗಿಸುವ ಹಾಗೂ ಜಲಧಾರೆ ಯೋಜನೆಯ ಮೂಲಕ ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.

ಜಿಲ್ಲೆಯ ಕೆಲವು ಅಂಗನವಾಡಿ ಕೇಂದ್ರಗಳಿಗೆ ಆಹಾರ ಸರಿಯಾಗಿ ಪೂರೈಕೆಯಾಗದಿರುವ ಕುರಿತು ದೂರುಗಳು ಬರುತ್ತಿದ್ದು, ಅವುಗಳನ್ನು ಕೂಡಲೇ ಪರಿಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಪ್ರಭುಗೌಡ ಪಾಟೀಲ, ಗುರುರಾಜ ಪಾಟೀಲ, ಪ್ರತಿಭಾ ಪಾಟೀಲ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.