ADVERTISEMENT

ಗಣರಾಜ್ಯೋತ್ಸವ: ಅಗತ್ಯ ಸಿದ್ಧತೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 17 ಜನವರಿ 2026, 6:12 IST
Last Updated 17 ಜನವರಿ 2026, 6:12 IST
ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಗಣರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಆನಂದ ಕೆ. ಪಾಲ್ಗೊಂಡಿದ್ದರು
ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಗಣರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಆನಂದ ಕೆ. ಪಾಲ್ಗೊಂಡಿದ್ದರು   

ವಿಜಯಪುರ: ‘ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 26 ರಂದು ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ದತೆಗೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಯಾವುದೇ ಗೊಂದಲಕ್ಕೆ ಆಸ್ಪದ ಕೊಡದೆ, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು’ ಎಂದರು.

‘ಪ್ಲಾಸ್ಟಿಕ್ ಧ್ವಜ ಮಾರಾಟವಾಗದಂತೆ ನೋಡಿಕೊಳ್ಳಬೇಕು. ಗಣರಾಜ್ಯೋತ್ಸವದ ಸಂದೇಶ ಸಿದ್ಧಪಡಿಸಲು ಅಧಿಕಾರಿಗಳು ತಮ್ಮ ಇಲಾಖೆಯ ಅಭಿವೃದ್ಧಿ ಕಾರ್ಯಕ್ರಮಗಳ ಮಾಹಿತಿಯನ್ನು ಸಕಾಲದಲ್ಲಿ ನೀಡಬೇಕು’ ಎಂದು ತಿಳಿಸಿದರು.

ADVERTISEMENT

ಅಂದು ಸಂಜೆ ಕಂದಗಲ್ ಹನುಮಂತರಾಯ ರಂಗ ಮಂದಿರದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಯಿತು. 

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ, ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್‌, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಅಡಿವೆಪ್ಪ ಸಾಲಗಲ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘ–ಸಂಸ್ಥೆಗಳ ಪದಾಧಿಕಾರಿಗಳು ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.