ADVERTISEMENT

ಜಿಲ್ಲಾ ಕ್ರೀಡಾಂಗಣ: ಉಚಿತ ಪ್ರವೇಶಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 28 ಜುಲೈ 2021, 12:23 IST
Last Updated 28 ಜುಲೈ 2021, 12:23 IST
ವಿಜಯಪುರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ತರಬೇತಿಗೆ ಉಚಿತ ಅವಕಾಶ ಕಲ್ಪಿಸಿಕೊಡಬೇಕು ಎಂದು ಒತ್ತಾಯಿ ಜಿಲ್ಲಾ ಕ್ರೀಡಾ ಸಂಸ್ಥೆಗಳ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು 
ವಿಜಯಪುರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ತರಬೇತಿಗೆ ಉಚಿತ ಅವಕಾಶ ಕಲ್ಪಿಸಿಕೊಡಬೇಕು ಎಂದು ಒತ್ತಾಯಿ ಜಿಲ್ಲಾ ಕ್ರೀಡಾ ಸಂಸ್ಥೆಗಳ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು    

ವಿಜಯಪುರ: ವಿವಿಧ ಕ್ರೀಡಾ ಸಂಸ್ಥೆಗಳ ಕ್ರೀಡಾ ಪಟುಗಳಿಗೆ ಜಿಲ್ಲಾ ಕ್ರೀಡಾಂಗಣದಲ್ಲಿ ತರಬೇತಿಗೆ ಹಾಗೂ ಕ್ರೀಡಾಂಗಣ ಪ್ರವೇಶಕ್ಕೆಉಚಿತ ಅವಕಾಶ ಕಲ್ಪಿಸಿಕೊಡಬೇಕು ಎಂದು ಒತ್ತಾಯಿ ವಿಜಯಪುರ ಜಿಲ್ಲಾ ಕ್ರೀಡಾ ಸಂಸ್ಥೆಗಳ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್‌ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.

ಕನಾಟಕ ರಾಜ್ಯ ಅಥ್ಲೇಟಿಕ್‌ ಸಂಸ್ಥೆಯ ಉಪಾಧ್ಯಕ್ಷ ಎಸ್.ಎಸ್.ಹಿರೇಮಠ ಮಾತನಾಡಿ, ಯಾವ ಜಿಲ್ಲೆಯಕ್ರೀಡಾಂಗಣದಲ್ಲೂ ಪ್ರವೇಶಕ್ಕೆ ಶುಲ್ಕ ಇರುವುದಿಲ್ಲ. ಪ್ರವೇಶ ಶುಲ್ಕ ತೆಗೆದುಕೊಳ್ಳುವುದರಿಂದ ಬಡ ಕ್ರೀಡಾಪಟುಗಳಿಗೆ ತೊಂದರೆಯಾಗುತ್ತದೆ ಬಡ. ಕ್ರೀಡಾ ಪಟುಗಳ ಹಿತದೃಷ್ಟಿಯಿಂದ ಕೂಡಲೇ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ವಿಜಯಪುರ ಜಿಲ್ಲಾ ಅಥ್ಲೇಟಿಕ್ಸ್ ಕ್ರೀಡಾ ಸಂಸ್ಥೆ, ವಾಲಿಬಾಲ್ ಸಂಸ್ಥೆ, ಬ್ಯಾಸ್ಕೇಟ್ ಬಾಲ್ ಸಂಸ್ಥೆ, ಸೈಕ್ಲಿಂಗ್ ಸಂಸ್ಥೆ, ಫುಟ್‌ಬಾಲ್ ಹಾಗೂ ಹಾಕಿ ಕ್ರೀಡಾ ಸಂಸ್ಥೆ ಹಾಗೂ ವಿವಿಧ ಕ್ರೀಡಾ ಸಂಸ್ಥೆಗಳು ಮತ್ತು ಜಿಲ್ಲಾ ಕ್ರೀಡಾಂಗಣದ ನಾಮ ನಿರ್ದೇಶಕ ಸದಸ್ಯರು, ಜಿಲ್ಲಾ ಕ್ರೀಡಾಂಗಣದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಲ್ಲಿ ಬದಲಾವಣೆ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ADVERTISEMENT

ಕ್ರೀಡಾ ಸಂಸ್ಥೆಗಳು, ಕ್ರೀಡಾ ಪಟುಗಳಿಗೆ ಸತತವಾಗಿ ತರಬೇತಿ ಪಡೆಯುವ ಕ್ರೀಡಾ ಪಟುಗಳಿಗೆ ಮಾತ್ರ ಉಚಿತವಾಗಿ ಪ್ರವೇಶಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ವಿಜಯಪುರ ಜಿಲ್ಲಾ ಕ್ರೀಡಾ ಸಂಸ್ಥೆಗಳ ಒಕ್ಕೂಟಗದಿಂದ ಮನವಿ ಸಲ್ಲಿಸಲಾಯಿತು.

ಬಿ.ಎಮ್.ಕೋಕರೆ, ಆರ್. ಎಸ್. ಬಿದರಿ, ರಾಜು ಬಿರಾದಾರ, ಎಸ್.ಕೆ.ಇನಾಂದಾರ, ನಾಮನಿರ್ದೇಶಕ ಬಸವರಾಜ ಗೊಳಸಂಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.